ಸೋಮವಾರ, ಏಪ್ರಿಲ್ 6, 2020
19 °C
ಗಣರಾಜ್ಯೋತ್ಸವದಲ್ಲಿ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್‌ ಹೇಳಿಕೆ

ನೈರುತ್ಯ ರೈಲ್ವೆ: ₹4,341 ಕೋಟಿ ಆದಾಯ ಗಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ನೈರುತ್ಯ ರೈಲ್ವೆ ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳ ಅವಧಿಯಲ್ಲಿ ಒಟ್ಟು ₹4,341 ಕೋಟಿ ಆದಾಯ ಗಳಿಸಿಸುವ ಮೂಲಕ ಕಳೆದ ಬಾರಿಗಿಂತ ₹22 ಕೋಟಿ ಹೆಚ್ಚು ಲಾಭ ಗಳಿಸಿದೆ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್‌ ಹೇಳಿದರು.

ನೈರುತ್ಯ ರೈಲ್ವೆ ಕೇಂದ್ರ ಕಚೇರಿಯಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇದೇ ಅವಧಿಯಲ್ಲಿ 2.7 ಕೋಟಿ ಟನ್‌ಗಳಷ್ಟು ಸರಕು ಸಾಗಣೆ ಮಾಡಲಾಗಿದೆ ಹಾಗೂ ಪ್ರತಿದಿನ 5 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ ಎಂದರು.

ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಹೊಸ 5 ಜೋಡಿ ರೈಲು ಮಾರ್ಗ ಪೂರ್ಣಗೊಳಿಸಲಾಗಿದೆ. 15 ತತ್ಕಾಲ್ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ. 101 ಸುವಿಧಾ ರೈಲು ಸಂಚಾರ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ವರ್ಷ ಪ್ರಮುಖ ಮಾರ್ಗಗಳ 266 ಕಿ.ಮೀ.ಗಳಷ್ಟು ಜೋಡಿ ಮಾರ್ಗ ಪೂರ್ಣಗೊಳಿಸಲು ಯೋಜಿಸಲಾಗಿದೆ. ಬಿಂಕದಕಟ್ಟಿ- ಹರ್ಲಾಪುರ ನಡುವಿನ 23 ಕಿ.ಮೀ. ಒಳಗೊಂಡು 106 ಕಿ.ಮೀ. ಜೋಡಿಮಾರ್ಗವಾಗಿ ಪರಿವರ್ತನೆಯಾಗಿದೆ. 76 ಕಿ.ಮೀ.ಗಳಷ್ಟು ಮಾರ್ಗ ವಿದ್ಯುದ್ದೀಕರಣ ಮಾಡಲಾಗಿದೆ ಎಂದರು.

ಲೆವೆಲ್ ಕ್ರಾಸಿಂಗ್ ಗೇಟ್‌ಗಳನ್ನು ನಿರ್ಮೂಲನೆಗೊಳಿಸುವ ಗುರಿ ಹೊಂದಿದ್ದು, ಮೇಲ್ಸೇತುವೆ ಹಾಗೂ ಕೆಳಸೇತುವೆಯ ಕೆಲಸಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

10 ನಿಲ್ದಾಣಗಳ ಕಟ್ಟಡಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ನಾಲ್ಕು ನಿಲ್ದಾಣಗಳಲ್ಲಿ ಅತಿ ದೊಡ್ಡ ರಾಷ್ಟ್ರಧ್ವಜಗಳನ್ನು ಅಳವಡಿಸಲಾಗಿದೆ. ಭದ್ರತೆ ದೃಷ್ಟಿಯಿಂದ ವಿಡಿಯೊ ಪರಿವೀಕ್ಷಣಾ ವ್ಯವಸ್ಥೆ (ವಿಎಸ್‌ಎಸ್) ಮಾಡಲಾಗಿದೆ. 308 ನಿಲ್ದಾಣಗಳಲ್ಲಿ ವೈಫೈ ಅಳವಡಿಸಿರುವುದಾಗಿ ತಿಳಿಸಿದರು.

ಪ್ರಧಾನ ಕಾರ್ಯಾಲಯ ಹಾಗೂ ಬೆಂಗಳೂರು ವಿಭಾಗಗಳಲ್ಲಿ ಇ-ಕಚೇರಿ ಜಾರಿಗೆ ತರುವ ಮೂಲಕ ನೈರುತ್ಯ ರೈಲ್ವೆಯು ಡಿಜಿಟಲೀಕರಣದತ್ತ ಮುನ್ನಡೆಯುತ್ತಿದೆ. ಹುಬ್ಬಳ್ಳಿ ಹಾಗೂ ಮೈಸೂರುಗಳಲ್ಲಿ ಇ-ಕಚೇರಿ ತೆರೆಯುವ ಕಾರ್ಯ ನಡೆಯುತ್ತಿದ್ದು, ಮಾರ್ಚ್‌ ಒಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು