ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಸಂಕ್ರಾಂತಿ: ವಿಶೇಷ ಬಸ್‌ ವ್ಯವಸ್ಥೆ

Published 13 ಜನವರಿ 2024, 16:21 IST
Last Updated 13 ಜನವರಿ 2024, 16:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಂಕ್ರಾಂತಿ ಹಾಗೂ ಸಾಲು ಸಾಲು ರಜೆ ಪ್ರಯುಕ್ತ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹಾಗೂ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೆಚ್ಚಿನ ಪ್ರಯಾಣಿಕರ ಸಂಚಾರವಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಎರಡನೇ ಶನಿವಾರ ಸಾರ್ವಜನಿಕ ರಜೆ ಸಂಕ್ರಾಂತಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹಾಗೂ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರು ಪ್ರಯಾಣ ಮಾಡಿದ್ದಾರೆ. ನಿತ್ಯದ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚಿದ ಬೇಡಿಕೆಗೆ ತಕ್ಕಂತೆ ಬೆಂಗಳೂರಿನಿಂದ ಹೆಚ್ಚುವರಿಯಾಗಿ ಒಂದು ಮಲ್ಟಿ ಆ್ಯಕ್ಸಲ್, ಒಂದು ಸ್ಲೀಪರ್ ಹಾಗೂ ಎಂಟು ವೇಗದೂತ ಬಸ್ಸುಗಳು ಹಾಗೂ ಧರ್ಮಸ್ಥಳಕ್ಕೆ ಎರಡು ವೇಗದೂತ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT