ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಜಲಪಾತಗಳ ವೀಕ್ಷಣೆಗೆ ವಿಶೇಷ ಬಸ್‌ ವ್ಯವಸ್ಥೆ

Published 1 ಆಗಸ್ಟ್ 2023, 14:38 IST
Last Updated 1 ಆಗಸ್ಟ್ 2023, 14:38 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇತ್ತೀಚೆಗೆ ರಾಜ್ಯದಲ್ಲಿ ಹಲವಾರು ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಇವುಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (ಎನ್‌ಡಬ್ಲುಕೆಆರ್‌ಟಿಸಿ) ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 

ಪ್ರತಿ ಭಾನುವಾರ, 2ನೇ ಮತ್ತು 4ನೇ ಶನಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಿಶೇಷ ಬಸ್ಸುಗಳ ಸೇವೆ ಇರುತ್ತದೆ. ಇದರಲ್ಲಿ ಒಂದೇ ದಿನದಲ್ಲಿ ಎರಡರಿಂದ ನಾಲ್ಕು ಸ್ಥಳಗಳ ವೀಕ್ಷಣೆಗೆ ಅನುಕೂಲವಾಗುವಂತೆ ವೇಳಾಪಟ್ಟಿ ರೂಪಿಸಲಾಗಿದೆ. ಪ್ರಯಾಣದರ ಕೂಡಾ ಮಿತವಾಗಿ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಹುಬ್ಬಳ್ಳಿ- ಜೋಗ್ ಫಾಲ್ಸ್: ವಿಶೇಷ ರಾಜಹಂಸ ಬಸ್ಸು ಗೋಕುಲ ರಸ್ತೆಯ ಹೊಸ ಬಸ್‌ನಿಲ್ದಾಣದಿಂದ ಬೆಳಿಗ್ಗೆ 7.45 ಕ್ಕೆ ಹೊರಡುತ್ತದೆ. ರಾತ್ರಿ 9.30ಕ್ಕೆ ಹಿಂದಿರುಗುತ್ತದೆ. ಪ್ರಯಾಣ ದರ ₹450. ವೋಲ್ವೋ ಎಸಿ ಬಸ್ಸು ಬೆಳಿಗ್ಗೆ 8 ಕ್ಕೆ ಹೊರಡುತ್ತದೆ. ರಾತ್ರಿ 9ಕ್ಕೆ ಹಿಂದಿರುತ್ತದೆ. ಪ್ರಯಾಣ ದರ ₹600. ಮಾರ್ಗ ಮಧ್ಯದಲ್ಲಿ ಶಿರಸಿ ಮಾರಿಕಾಂಬ ದೇವಸ್ಥಾನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 7760991674 / 7760991682 ಸಂಖ್ಯೆಗಳಿಗೆ ಸಂಪರ್ಕಿಸಬಹುದು. 

ಧಾರವಾಡ- ದಾಂಡೇಲಿ–ಉಳವಿ:  ಈ ಮಾರ್ಗದ ವಿಶೇಷ ವೇಗದೂತ ಬಸ್ಸು ಧಾರವಾಡ ಹೊಸ ಬಸ್ ನಿಲ್ದಾಣದಿಂದ ಬೆಳಿಗ್ಗೆ 7.30ಕ್ಕೆ ಹೊರಡುತ್ತದೆ. ದಾಂಡೇಲಿ ಮೊಸಳೆ ಪಾರ್ಕ್, ಮೌಲಂಗಿ ಫಾಲ್ಸ್, ಕೂಳಗಿ ನೇಚರ್ ಪಾರ್ಕ್ ಹಾಗೂ ಉಳವಿ ದೇವಸ್ಥಾನ ವೀಕ್ಷಣೆ ಮುಗಿಸಿಕೊಂಡು ಸಂಜೆ 7 ಕ್ಕೆ ಹಿಂದಿರುಗುತ್ತದೆ. ಪ್ರಯಾಣ ದರ ₹340. 

ಧಾರವಾಡ- ಗೋಕಾಕ್ ಫಾಲ್ಸ್: ವಿಶೇಷ ವೇಗದೂತ ಬಸ್ ಧಾರವಾಡ ಹೊಸ ಬಸ್ ನಿಲ್ದಾಣದಿಂದ ಬೆಳಿಗ್ಗೆ 7.30ಕ್ಕೆ ಹೊರಡುತ್ತದೆ. ನವಿಲು ತೀರ್ಥ ಡ್ಯಾಮ್, ಗೋಕಾಕ್ ಫಾಲ್ಸ್ ಹಾಗೂ ಹಿಡಕಲ್ ಡ್ಯಾಮ್ ವೀಕ್ಷಣೆ ಮುಗಿಸಿಕೊಂಡು ಧಾರವಾಡಕ್ಕೆ ಸಂಜೆ 7ಕ್ಕೆ ಹಿಂದಿರುಗುತ್ತದೆ. ಪ್ರಯಾಣ ದರ ₹340. ಹೆಚ್ಚಿನ ಮಾಹಿತಿಗಾಗಿ ಮೊ. 9148266332 / 7760982552 ಸಂಖ್ಯೆಗಳಿಗೆ ಸಂಪರ್ಕಿಸಬಹುದು. 

ಬೆಳಗಾವಿ - ಗೋಕಾಕ್ ಫಾಲ್ಸ್: ವಿಶೇಷ ವೇಗದೂತ ಬಸ್ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಬೆಳಿಗ್ಗೆ 9 ಗಂಟೆಗೆ ಹೊರಡುತ್ತದೆ. ಹಿಡಕಲ್ ಡ್ಯಾಮ್, ಗೋಡಚಿನಮಕ್ಕಿ ಹಾಗೂ ಗೋಕಾಕ್ ಫಾಲ್ಸ್ ವೀಕ್ಷಣೆ ಮುಗಿಸಿಕೊಂಡು ಸಂಜೆ 6 ಕ್ಕೆ ಹಿಂದಿರುಗುತ್ತದೆ. ಪ್ರಯಾಣ ದರ ₹190. 

ಬೆಳಗಾವಿ- ಅಂಬೋಲಿ ಫಾಲ್ಸ್: ವಿಶೇಷ ವೇಗದೂತ ಬಸ್ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ಬೆಳಿಗ್ಗೆ 9 ಗಂಟೆಗೆ ಹೊರಡುತ್ತದೆ. ನಾಗರತಾಸ್ ಫಾಲ್ಸ್ ಹಾಗೂ ಅಂಬೋಲಿ ಫಾಲ್ಸ್ ವೀಕ್ಷಣೆ ಮುಗಿಸಿಕೊಂಡು ಸಂಜೆ 6 ಕ್ಕೆ ಹಿಂದಿರುಗುತ್ತದೆ. ಪ್ರಯಾಣ ದರ ₹290. ಹೆಚ್ಚಿನ ಮಾಹಿತಿಗಾಗಿ 7760991612/ 7760991613 / 7760991625 ಸಂಖ್ಯೆಗಳಿಗೆ ಸಂಪರ್ಕಿಸಬಹುದು. 

ಈ ವಿಶೇಷ ಬಸ್ಸುಗಳಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಇರುವುದಿಲ್ಲ. ಮುಂಗಡ ಟಿಕೆಟ್ ಬುಕ್ಕಿಂಗ್ ಬಸ್ ನಿಲ್ದಾಣಗಳಲ್ಲಿ, ಅವತಾರ್ ಕೌಂಟರ್ ಗಳಲ್ಲಿ, ಕೆಎಸ್‌ಆರ್‌ಟಿಸಿ ಮೊಬೈಲ್‌ ಆ್ಯಪ್‌ ಹಾಗೂ ವೆಬ್ ಸೈಟ್ www.ksrtc.in ನಲ್ಲಿ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT