ಸೋಮವಾರ, ಸೆಪ್ಟೆಂಬರ್ 20, 2021
30 °C

ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲು ಹಿರೇಮಠ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೋವಿಡ್‌ ಆತಂಕ ಪೂರ್ಣವಾಗಿ ಕಡಿಮೆಯಾಗದಿದ್ದರೂ ಮಹಾನಗರ ಪಾಲಿಕೆ ಚುನಾವಣೆ ನಡೆಸುತ್ತಿರುವುದು ಸರಿಯಲ್ಲ. ಇದನ್ನು ಮುಂದೂಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕುಂಭಮೇಳ ಹಾಗೂ ಪಶ್ಚಿಮ ಬಂಗಾಳದಲ್ಲಿ ವಿನಾಕಾರಣ ಹಲವು ಹಂತಗಳಲ್ಲಿ ಚುನಾವಣೆ ನಡೆಸಿದ ಪರಿಣಾಮ ಕೋವಿಡ್‌ ಎರಡನೇ ಅಲೆ ತೀವ್ರಗತಿಯಲ್ಲಿ ಹೆಚ್ಚಾಯಿತು. ಮೂರನೆ ಅಲೆಯ ಆತಂಕದಲ್ಲಿರುವ ಕಾರಣ ಈಗ ಚುನಾವಣೆ ನಡೆಸಬಾರದು. ಸರ್ಕಾರ ಯಾವಾಗಲೂ ಸಮಸ್ಯೆಯ ಭಾಗವಾಗಬಾರದು, ಜನರ ಜೀವದ ಜೊತೆ ಚೆಲ್ಲಾಟವಾಡಬಾರದು’ ಎಂದರು.

‘ಕೋವಿಡ್‌ ಪೂರ್ಣವಾಗಿ ಹೋಗುವ ತನಕ ಚುನಾವಣೆ ನಡೆಸದಂತೆ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗೆ ಕೆಲ ತಿಂಗಳ ಹಿಂದೆಯೇ ಪತ್ರ ಬರೆದಿದ್ದೇನೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು