ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ | ಎಸ್ಸೆಸ್ಸೆಲ್ಸಿ ಪರೀಕ್ಷೆ: 314 ವಿದ್ಯಾರ್ಥಿಗಳು ಗೈರು

Published 25 ಮಾರ್ಚ್ 2024, 16:06 IST
Last Updated 25 ಮಾರ್ಚ್ 2024, 16:06 IST
ಅಕ್ಷರ ಗಾತ್ರ

ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭವಾಗಿದ್ದು, ಮೊದಲ ದಿನ 28,445 ವಿದ್ಯಾರ್ಥಿಗಳು ಹಾಜರಾಗಿದ್ದರು. 314 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ವರೆಗೆ ಪ್ರಥಮ ಭಾಷಾ ವಿಷಯದ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ. ಸಹಿತ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. 

’ಜಿಲ್ಲೆಯ ಎಲ್ಲ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದೆ. ಯಾವುದೇ ಕೇಂದ್ರದಲ್ಲಿ ಅಕ್ರಮಗಳು ನಡೆದಿಲ್ಲ‘ ಎಂದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ‘ಪ್ರಜಾವಾಣಿ‘ಗೆ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT