ಧಾರವಾಡ: ‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ವಿಶೇಷವಾದ ಅಧ್ಯಯನ ಪ್ರವಾಸ ಆಯೋಜಿಸಲಿದೆ. ನ. 14ರೊಳಗೆ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಸಾಧಕ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ತಿಳಿಸಿದರು.

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದು ಸಾಧನೆ ಮಾಡಿದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಅಕಾಡೆಮಿಯ ಆದ್ಯತೆಯಾಗಿದೆ. ಕನ್ನಡ ನಾಡು ನುಡಿ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ನಾಡಿನ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡಬೇಕಾಗಿದೆ ಎಂದರು.

ಅಕಾಡೆಮಿಯ ಅಧಿಕಾರಿಗಳಾದ ಅನ್ನಪೂರ್ಣ ಸಂಗಳದ ಪುಷ್ಪ ಹಂಜಗಿ, ಸುಭಾಷ ಚಂದರಗಿ. ಸ್ವರ್ಣಲತಾ ಮಠದ, ಪದ್ಮಶ್ರೀ ಮೇಟಿ, ಅರ್ಪಿತಾ ಹೆಗಡಿ, ಅಶೋಕ್ ಬಸ್ತಿ, ಶಿವಕುಮಾರ್ ದಿಂಡುರ, ಬಾಬುರಾವ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.