ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕಾಳಜಿಗೆ ಒತ್ತು ನೀಡಿ: ಕೃಷ್ಣ ಬಾಜಪೇಯಿ

ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಬಾಜಪೇಯಿ ಸಲಹೆ
Last Updated 25 ಜುಲೈ 2021, 12:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸದಾ ಒತ್ತಡದಲ್ಲಿ ಕೆಲಸ ಮಾಡುವ ಸಾರಿಗೆ ಸಿಬ್ಬಂದಿ, ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಆಗಾಗ, ಆರೋಗ್ಯ ತಪಾಸಣೆ ಮಾಡಿಸಿಕೊಂಡು ಕಾಳಜಿ ವಹಿಸಬೇಕು’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಕೃಷ್ಣ ಬಾಜಪೇಯಿ ಹೇಳಿದರು.

ನಗರದ ಹುಬ್ಬಳ್ಳಿ ಸಾರಿಗೆ-1ನೇ ಘಟಕದಲ್ಲಿ ಎನ್‌ಡಬ್ಲ್ಯೂಕೆಆರ್‌ಟಿಸಿ, ರೋಟರಿ ಕ್ಲಬ್ ಸೇವನ್ ಹಿಲ್ಸ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ಕಾರ್ಮಿಕರಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಸಂಸ್ಥೆಯು ಆಗಾಗ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ಎಲ್ಲಾ ಸಿಬ್ಬಂದಿ ತಪಾಸಣೆ ಮಾಡಿಸಿಕೊಳ್ಳಬೇಕು. ಅನಾರೋಗ್ಯದ ಲಕ್ಷಣಗಳಿದ್ದರೆ ತಕ್ಷಣ ಚಿಕಿತ್ಸೆ ಪಡೆಯಬೇಕು’ ಎಂದು ಸಲಹೆ ನೀಡಿದರು.

ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ, ಅಸಿಸ್ಟೆಂಟ್ ಗವರ್ನರ್ ಹಾಗೂ ಮಕ್ಕಳ ತಜ್ಞರೂ ಆಗಿರುವ ಡಾ. ಕವನ ದೇಶಪಾಂಡೆ ಮಾತನಾಡಿ, ‘ಕೋವಿಡ್-19 ಸಂದರ್ಭದಲ್ಲಿ ಜೀವದ ಹಂಗು ತೊರೆದು ಸಾರಿಗೆ ಇಲಾಖೆ ಸಿಬ್ಬಂದಿ ಕೆಲಸ ಮಾಡಿದ್ದಾರೆ. ಜನರ ಮಧ್ಯೆ ಇದ್ದು ಕೆಲಸ ಮಾಡುವ ಅವರಿಗೆ ಮಧುಮೇಹ, ರಕ್ತದೊತ್ತಡ, ಕಣ್ಣಿನ ಸಮಸ್ಯೆಗಳು ಸಾಮಾನ್ಯ. ಹಾಗಾಗಿ, ಈ ರೋಗಗಳ ಬಗ್ಗೆ ಹೆಚ್ಚಿನ ಕಾಳಜಿ ಮಾಡಿಕೊಳ್ಳಬೇಕು’ ಎಂದರು.

ಶಿಬಿರದಲ್ಲಿ 19 ಮಂದಿ ರಕ್ತದಾನ ಮಾಡಿದರು. 300ಕ್ಕೂ ಹೆಚ್ಚು ಸಿಬ್ಬಂದಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಕಣ್ಣಿನ ಚಿಕಿತ್ಸೆ ಮಾಡಲಾಯಿತು.

ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಪಿ.ವೈ. ನಾಯಕ,ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ, ಘಟಕದ ವ್ಯವಸ್ಥಾಪಕ ಜಿ. ಪರಮೇಶ್ವರಪ್ಪ,ರೋಟರಿ ಕ್ಲಬ್ ಸೇವೆನ್ ಹಿಲ್ಸ್ ಅಧ್ಯಕ್ಷ ಡಾ. ಪಲ್ಲವಿ ದೇಶಪಾಂಡೆ, ಕಾರ್ಯದರ್ಶಿ ಗೌರಿ ಮದನಭಾವಿ, ಡಾ. ಸುಜಾತಾ ಹಸವಿಮಠ, ಡಾ. ನೀತಾ ಸಾಂಬ್ರಾಣಿ, ರಕ್ತ ಭಂಡಾರದ ಮುಖ್ಯಸ್ಥ ಡಾ. ಉಮೇಶ ಹಳ್ಳಿಕೇರಿ, ಎಂಜಿನಿಯರ್ ಸಂಘದ ಅಧ್ಯಕ್ಷರಾದ ಸುನೀಲ ಬಾಗೇವಾಡಿ, ರೆಡ್ ಕ್ರಾಸ್ ಸದಸ್ಯರಾದ ಮಾರ್ತಾಂಡಪ್ಪ ಎಂ. ಕತ್ತಿ, ಸಗೀತಾ ಬಾಗೇವಾಡಿ, ಗಿರಿಜಾ ಹಿರೇಮಠ, ಸುಮನ ಹೆಬ್ಳೀಕರ್ ಹಾಗೂರಾಜೇಂದ್ರ ಆರ್.ಎಂ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT