ಭಾನುವಾರ, ಮೇ 22, 2022
28 °C

‘ತಜ್ಞರ ವರದಿ ಪಡೆದು ಶಾಲೆ ಆರಂಭಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ರಾಜ್ಯದಲ್ಲಿ ಮೇ 16ರಿಂದ ಶಾಲೆಗಳನ್ನು ಪ್ರಾರಂಭಿಸಬೇಕೇ ಬೇಡವೇ ಕುರಿತು ತಜ್ಞರ ವರದಿ ಪಡೆದು ನಿರ್ಧಾರ ಕೈಗೊಳ್ಳಬೇಕು. ಬಿಸಿಲಿನ ತಾಪಮಾನ ಹೆಚ್ಚಾಗಿರುವ ಜೊತೆಗೆ, ಅಕಾಲಿಕ ಮಳೆ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಮೊದಲು ಶಿಕ್ಷಣ ತಜ್ಞರ ಹಾಗೂ ಮಕ್ಕಳ ತಜ್ಞರ ವರದಿಯನ್ನು ಪಡೆಯಬೇಕು ಎಂದು ಅಶೋಕ ಸಜ್ಜನ ಹೇಳಿದ್ದಾರೆ

ಇದೇ ಕಾರಣಕ್ಕಾಗಿ ರಜೆಯನ್ನು ಮುಂದೂಡುವ ಕುರಿತು ಈಗಾಗಲೇ ಶಿಕ್ಷಕರ ಸಂಘಟನೆಗಳು ಮನವಿ ಕೂಡ ಸಲ್ಲಿಸಿವೆ. ಇವೆಲ್ಲವನ್ನೂ ಪರಿಗಣಿಸಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಶಾಲೆ ಆರಂಭಕ್ಕೆ ಮುಂಚೆ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು