ಹುಬ್ಬಳ್ಳಿ: ಜಂಗಳಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಹುಬ್ಬಳ್ಳಿ: ತಾಲ್ಲೂಕಿನ ಬಿಡ್ನಾಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಎಂ.ಎಚ್. ಜಂಗಳಿ ಅವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಜಂಗಳಿ ಅವರು ಮೊದಲು ಕುಂದಗೋಳ ತಾಲ್ಲೂಕಿನ ರಾಮನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದರು. ಬಳಿಕ ಬಿಡ್ನಾಳ ಶಾಲೆಗೆ ವರ್ಗವಾಗಿ ಬಂದು ಅಲ್ಲಿ 18 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಮೂರು ವರ್ಷ ಬಿಡ್ನಾಳ ಕ್ಲಸ್ಟರ್ ಮಟ್ಟದ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿದ್ದಾಗ ಜಂಗಳಿ ಅವರು ಎರಡು ಹೊಸ ಶಾಲೆಗಳನ್ನು ಆರಂಭಿಸಲು ನೆರವಾಗಿದ್ದರು. ಬಿಡ್ನಾಳ ಶಾಲೆಯ ಸೌಂದರ್ಯೀಕರಣಕ್ಕೆ ಸ್ವಂತ ಖರ್ಚಿನಿಂದ ₹1.5 ಲಕ್ಷ ನೀಡಿದ್ದರು. 2015ರಿಂದ 6 ಮತ್ತು 7ನೇ ತರಗತಿಯ ಆಸಕ್ತ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ ಮಾಡಿದರು. ಇದರಿಂದ ಗ್ರಾಮದ ಸುತ್ತಮುತ್ತಲಿನ ಶಾಲೆಗಳು ಮಕ್ಕಳು ಸರ್ಕಾರಿ ಶಾಲೆಯತ್ತ ನೋಡುವಂತಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.