ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಶಾಸಕ ಟೆಂಗಿನಕಾಯಿ

Published 13 ಮೇ 2024, 15:56 IST
Last Updated 13 ಮೇ 2024, 15:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ, ರಾಜ್ಯದ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

‘ಕರ್ನಾಟಕದಲ್ಲಿ ಅಪರೇಷನ್ ಕಮಲ ಮಾಡುತ್ತಾರೆ’ ಎನ್ನುವ ಮಹರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಹೇಳಿಕೆಗೆ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಅಲೆ ಕಾಣಬಹುದು’ ಎಂದರು.

‘ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸಲಾಗುತ್ತಿದೆ. ಈ ಪ್ರಕರಣ ನ್ಯಾಯಯುತವಾಗಿ ತನಿಖೆ ನಡೆಯಬೇಕೆಂದರೆ ಸಿಬಿಐಗೆ ಹಸ್ತಾಂತರಿಸಬೇಕು. ಆಗ ಮಾತ್ರ, ಇದರ ಹಿಂದೆ ಇರುವ ನಿರ್ಮಾಪಕರು, ನಿರ್ದೇಶಕರು ಯಾರು ಎನ್ನುವುದು ಬಹಿರಂಗವಾಗವಾಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT