ಸೋಮವಾರ, ಮಾರ್ಚ್ 27, 2023
30 °C

ಸರ್ಕಾರ ಮತ್ತು ಪಕ್ಷದ ನಾಯಕರ ವಿರುದ್ಧ ಹೇಳಿಕೆ: ಯತ್ನಾಳಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಸರ್ಕಾರ ಮತ್ತು ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಅವಹೇಳನಕಾರಿ ಭಾಷೆ ಬಳಸಿ ಮಾತನಾಡುವ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಪಕ್ಷದಿಂದ ನೋಟಿಸ್ ನೀಡಲಾಗಿದೆ. ಮುಂದೆ ಈ ರೀತಿ ಮಾತಾಡುವುದಿಲ್ಲ ಎಂದೂ ಅವರು ಹೇಳಿದ್ದಾರೆ’ ಎಂದು ರಾಜ್ಯ ಬಿಜೆಪಿ ಉಸ್ತು ವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಯಾರ ಬಗ್ಗೆಯೂ ಹೀಗಳೆಯುವ ಭಾಷೆಯಲ್ಲಿ ಮಾತನಾಡದಂತೆ ಯತ್ನಾಳ ಅವರಿಗೆ ಹಿಂದೆಯೂ ಸೂಚನೆ ನೀಡಲಾಗಿತ್ತು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು