ಗುರುವಾರ , ನವೆಂಬರ್ 26, 2020
19 °C

ಹೈಕಮಾಂಡ್ ಬೆಂಬಲದಿಂದ ಯತ್ನಾಳ ಹೇಳಿಕೆ: ಬಸವರಾಜ ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Basavaraja Horatti

ಹುಬ್ಬಳ್ಳಿ: ಹೈಕಮಾಂಡ್‌ ಬೆಂಬಲವಿಲ್ಲದೆ ಹೋದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಲು ಹೇಗೆ ಸಾಧ್ಯ? ಎಂದು ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಹೊರಟ್ಟಿ ’ಹೈಕಮಾಂಡ್‌ನ ಕುಮ್ಮಕ್ಕು ಇಲ್ಲದೇ ಯತ್ನಾಳ ಮಾತನಾಡಿರುವುದಿಲ್ಲ. ಪಕ್ಷದ ವಿರುದ್ಧವಾಗಿ ಮಾತನಾಡಿದ್ದರೂ ಅವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದೇ ಎಲ್ಲವನ್ನೂ ಅರ್ಥೈಸುತ್ತದೆ’ ಎಂದರು. ಯತ್ನಾಳ ಹೇಳಿಕೆ, ಬಿಜೆಪಿ ಪ್ರತಿಕ್ರಿಯೆ ಇವೆಲ್ಲವನ್ನೂ ನೋಡಿದರೆ ಪಕ್ಷದಲ್ಲಿ ಆಂತರಿಕ ಕಲಹ ಇರುವುದು ಗೊತ್ತಾಗುತ್ತದೆ ಎಂದರು.

ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಸಚಿವ ಜಗದೀಶ ಶೆಟ್ಟರ್‌ ‘ನಮ್ಮ ನಾಯಕರಾಗಿ ಯಡಿಯೂರಪ್ಪ ಅವರು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು