ಅಳ್ನಾವರ: ತಾಲ್ಲೂಕಿನಲ್ಲಿ ರೈತರು ಬೆಳೆದ ಬೆಳೆಗಳಿಗೆ ಹಾಗೂ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಪೂರೈಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಈಗಾಗಲೇ ಮುಂಗಾರು ಪೂರ್ವ ಕೃಷಿ ಚಟುವಟಿಕೆ ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ರೈತರಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ದೊರೆಯುತ್ತಿಲ್ಲ. ಕೃಷಿ ಇಲಾಖೆಯು ರೈತರಿಗೆ ಯಾವುದೇ ತೊಂದರೆ ಆಗದಂತೆ ತಕ್ಷಣವೇ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು, ಮೆಕ್ಕೆಜೋಳ ಭತ್ತ ಬೆಳೆಯಲಾಗುತ್ತದೆ. ಕಬ್ಬು ಬೆಳೆಗೆ ಯೂರಿಯಾ ಗೊಬ್ಬರ ಸಿಗದಿದ್ದಕ್ಕೆ ಬೆಳೆವಣಿಗೆ ಕುಂಠಿತವಾಗಿ ಹಾನಿಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಸಂಪೂರ್ಣ ಮಳೆಯಾಗಿ ಭೂಮಿ ತೇವಾಂಶದಿಂದ ಕೂಡಿದೆ. ಸಕಾಲದಲ್ಲಿ ಬೆಳೆಗಳಿಗೆ ರಸಗೊಬ್ಬರ ಹಾಕಿದರೆ ಇಳುವರಿ ಬರುತ್ತವೆ. ಮೆಕ್ಕೆಜೋಳ ಮತ್ತು ಭತ್ತ ಬಿತ್ತನೆ ಆರಂಭದ ಹಂತದಲ್ಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತಕ್ಷಣ ಗೊಬ್ಬರ ನೀಡಲು ಸರ್ಕಾರ ಆದೇಶ ನೀಡದಿದ್ದಲ್ಲಿ ತಹಶೀಲ್ದಾರ್ ಕಚೇರಿ ಎದುರು ರೈತರು ಧರಣಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ. ರೈತ ಮುಖಂಡದಾರ ಶಿವಾಜಿ ಡೊಳ್ಳಿನ್, ನಾಗರಾಜ ಬುಡರಕಟ್ಟಿ, ತಾನಾಜಿ ಬಾಲಗೇರಿ, ರಾಜು ವಾಘ, ಮೊಕಾಸಿ, ಮೈತ್ರಿ, ರುದ್ರಪ್ಪ ತೊರಗಲ್, ಅಷಪಾಕ್ ಡೆಂಕೆವಾಲೆ, ಸೋಮನಿಂಗ್ ಕಂಗ್ರಾಳಕರ, ಮಂಜು ಕುಲಕರ್ಣಿ, ಆನಂದ ಜಾಧವ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-195638940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.