ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಾಜ ಕೋರಿಗೆ ಕಥಾ ಪ್ರಶಸ್ತಿ

Last Updated 25 ಮೇ 2022, 4:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದಅಕ್ಷರ ಸಾಹಿತ್ಯ ವೇದಿಕೆ ಹಾಗೂ ವಿಜಯಾ ಅಗಸನಕಟ್ಟೆ ಪ್ರತಿ ವರ್ಷ ನೀಡುವಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ ಈ ಬಾರಿ ನಾಗರಾಜ ಕೋರಿ ಅವರ ‘ಕಳವಳದ ದೀಗಿ ಕುಣಿದಿತ್ತವ್ವ' ಎಂಬ ಹಸ್ತಪ್ರತಿಗೆ ದೊರೆತಿದೆ.

ಪುರಸ್ಕಾರ ₹ 5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಜೂನ್‌ನಲ್ಲಿ ಪ್ರಶಸ್ತಿ ಪ್ರದಾನ ಜರುಗಲಿದೆ. ಬರಹಗಾರರಾದ ಎಂ.ಬಿ ಅಡ್ನೂರ ಮತ್ತು ಡಾ. ಚಿದಾನಂದ ಕಮ್ಮಾರ ಅವರು ಅಂತಿಮ ಸುತ್ತಿನ ಆಯ್ಕೆಯ ತೀರ್ಪುಗಾರರಾಗಿದ್ದರು.

ನಾಗರಾಜ ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿ. ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಬನ್ನಿಗನೂರು ಗ್ರಾಮದವರು. ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಥೆಗಳು ಪ್ರಕಟಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT