ಹುಬ್ಬಳ್ಳಿ: ‘ಬೀದಿ ನಾಯಿಗಳನ್ನು ನಿಯಂತ್ರಿಸುವ ಹೊಣೆಗಾರಿಕೆಯನ್ನು ಸರ್ಕಾರವು ಶಿಕ್ಷಕರಿಗೆ ನೀಡಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕ್ರಮ ಬೇಸರ ಮೂಡಿಸಿದೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

‘ಬೀದಿ ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವ ಸರ್ಕಾರವು ಶಾಲಾ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡುವಂತೆ ಸೂಚಿಸಿದೆ. ಶಿಕ್ಷಕರು, ಮಕ್ಕಳಿಗೆ ಬೋಧಿಸುವ ಕೆಲಸ ಬಿಟ್ಟು ಬೀದಿ ನಾಯಿಗಳನ್ನು ಕಾಯುವ ಕೆಲಸ ಮಾಡುವಂತಾಗುತ್ತದೆ’ ಎಂದಿದ್ದಾರೆ.

‘ಶಿಕ್ಷಕರು ಈಗಾಗಲೇ ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ, ಮಕ್ಕಳಿಗೆ ಹಾಲು–ಮೊಟ್ಟೆ ವಿತರಣೆ ಹಾಗೂ ಅದರ ಲೆಕ್ಕ ಇಡುವ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಇದರಿಂದ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಗಮನ ಹರಿಸಲಾಗುವುದಿಲ್ಲ. ಮಕ್ಕಳ ಕಲಿಕಾ ಗುಣಮಟ್ಟ ಕಡಿಮೆಯಾಗಿ ಫಲಿತಾಂಶ ಸಹ ಕಡಿಮೆಯಾಗುತ್ತದೆ’ ಎಂದು ತಿಳಿಸಿದ್ದಾರೆ.

‘ರಾಜ್ಯ ಸರ್ಕಾರದ ಜತೆಗೆ ಕೇಂದ್ರ ಸರ್ಕಾರವು ಜನಗಣತಿ ಆರಂಭಿಸುತ್ತಿದ್ದು, ಅದರಲ್ಲೂ ಶಿಕ್ಷಕರೇ ಪಾಲ್ಗೊಳ್ಳಬೇಕಿದೆ. ಸರ್ಕಾರ ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.