ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Published 11 ಜುಲೈ 2024, 7:09 IST
Last Updated 11 ಜುಲೈ 2024, 7:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಶಿರಡಿನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ವಿಜಯಪುರದ ರಾಕೇಶ ಶ್ರೀಶೈಲ್ ಜಂಬಲದಿನ್ನಿ (22) ಆತ್ಮಹತ್ಯೆ ಗೆ ಶರಣಾದ ವಿದ್ಯಾರ್ಥಿ. ರಾಕೇಶ ಅವರು ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್) ೬ನೇ ಸೆಮಿಸ್ಟರ್ ಓದುತ್ತಿದ್ದರು.

ರಾಕೇಶ ಬುಧವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಕಿ ಫ್ಯಾನ್ ಗೆ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ಜುಲೈ 8 ರಂದು ಪರೀಕ್ಷೆ ಮುಗಿದಿದ್ದವು. ಅವನ ಕೊಠಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು‌ ಊರಿಗೆ ಹೋಗಿದ್ದರು. ಬುಧವಾರ ಎಷ್ಟು ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಕೊಠಡಿಯ ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿಯಿತು' ಎಂದು ಹಾಸ್ಟೆಲ್ ವಿದ್ಯಾರ್ಥಿ ಸಚಿನ್ ಹೇಳಿದರು.

'ರಾಕೇಶ ಆನ್ ಲೈನ್ ಗೇಮ್ ಆಡುತ್ತಿದ್ದ. ಅದರಲ್ಲಿ ಹಣ ಕಳೆದುಕೊಂಡಿರುವುದಾಗಿಯೂ ಹೇಳಿದ್ದ. ಪರೀಕ್ಷೆ ಮುಗಿದಿದ್ದು ಎರಡು ದಿನಗಳಲ್ಲಿ ಮನೆಗೆ ಬರುವುದಾಗಿ ಮನೆಯವರಿಗೆ ತಿಳಿಸಿದ್ದ' ಎಂದರು.

ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹಾಸ್ಟೆಲ್ ಗೆ ಭೇಟಿ ನೀಡಿ ಪರಿಶೀಲಿಸಿದರು.

'ರಾಕೇಶ ಮೊಬೈಲ್ ಆ್ಯಪ್ ಗಳಲ್ಲಿ ಗೇಮ್ ಆಡುತ್ತಿದ್ದ. ಅದರಲ್ಲಿ ಹಣ ಕಳೆದುಕೊಂಡಿದ್ದ ಎಂದು ಆತನ ಸ್ನೇಹಿತರು ತಿಳಿಸಿದ್ದಾರೆ. ಈ ಬಗ್ಗೆ ಆತನ ಪೋಷಕರಿಗೂ ಮಾಹಿತಿ ನೀಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುವುದು' ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.

ಮೃತದೇಹವನ್ನು ಕಿಮ್ಸ್ ಶವಾಗಾರದಲ್ಲಿ ಇರಿಸಲಾಗಿದೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT