ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್‌ಗೆ ಪತ್ರ ಸಲ್ಲಿಕೆ; ಸಚಿವ ಎಚ್.ಕೆ.ಪಾಟೀಲ

ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ
Published 23 ಏಪ್ರಿಲ್ 2024, 6:46 IST
Last Updated 23 ಏಪ್ರಿಲ್ 2024, 6:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ನೇಹಾ ಕೊಲೆ ಪ್ರಕರಣದ ವಿಚಾರಣೆಗೆ ರಾಜ್ಯ ಸರ್ಕಾರ ವಿಶೇಷ ತ್ವರಿತ ನ್ಯಾಯಾಲಯ ಸ್ಥಾಪನೆಗೆ ನಿರ್ಧರಿಸಿದ್ದು, ಆ ಕುರಿತು ಇಂದು ಹೈಕೋರ್ಟ‌್‌ಗೆ ಪತ್ರ ಸಲ್ಲಿಸಲಿದೆ' ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ‌ ಹೇಳಿದರು.

ನಗರದ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ನೀಡಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. 'ಪ್ರಕರಣವನ್ನು ಈಗಾಗಲೇ ಸಿಐಡಿಗೆ ಒಪ್ಪಿಸಿದ್ದು, ತನಿಖೆ ಆರಂಭವಾಗುತ್ತಿದೆ. ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆಯಾಗಿ, ನ್ಯಾಯ ಸಿಗಲಿದೆ. ರಾಜ್ಯದ ಜನತೆಯ ಭಾವನೆಗೆ ಸರ್ಕಾರ ಸ್ಪಂದಿಸುತ್ತಿದೆ' ಎಂದರು.

'ಅನಿವಾರ್ಯ ಕಾರಣದಿಂದ ನಿರಂಜನ ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ನೀಡಲು ಆಗಿರಲಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿರಂಜನ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ, ಸಾಂತ್ವನ ಹೇಳಿದ್ದಾರೆ. ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅವರೇ ವಿವರಿಸಿದ್ದಾರೆ' ಎಂದರು.

'ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವರು ಹೇಳಿದ ಹೇಳಿಕೆ ಮುಗಿದ ಅಧ್ಯಾಯ. ಈಗಾಗಲೇ ಅದನ್ನು ಸರಿಪಡಿಸಲಾಗಿದೆ. ಗೃಹ ಸಚಿವರು ಸಹ ಆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ' ಎಂದು ಸಚಿವ ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT