ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿ: ಮಾನವ ಸರಪಳಿಯಲ್ಲಿ ಮೂಡಿದ ಕರ್ನಾಟಕ ನಕ್ಷೆ

Last Updated 19 ಏಪ್ರಿಲ್ 2019, 10:13 IST
ಅಕ್ಷರ ಗಾತ್ರ

ಧಾರವಾಡ: ಬರಲಿರುವ ಚುನಾವಣೆಯಲ್ಲಿ ಉತ್ತಮ ಮತದಾನ ದಾಖಲಿಸುವ ಮಹತ್ವಾಕಾಂಕ್ಷೆಯೊಂದಿಗೆ ವೈವಿಧ್ಯಮಯ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ (ಸ್ವೀಪ್) ಸಮಿತಿಯ ಆಶ್ರಯದಲ್ಲಿ ಶುಕ್ರವಾರ ಬೃಹತ್ ಮಾನವ ಸರಪಳಿ ರಚಿಸಿ ಮತದಾರರ ಗಮನ ಸೆಳೆಯಲಾಯಿತು.

ಚುನಾವಣಾ ಜಾಗೃತಿ ಗೀತೆ, ನೃತ್ಯ ಕಾರ್ಯಕ್ರಮ ಜರುಗಿದವು. ನೂರಾರು ವಿದ್ಯಾರ್ಥಿಗಳು ಇಲ್ಲಿನ ಕರ್ನಾಟಕ ಕಾಲೇಜು ಮೈದಾನದಲ್ಲಿ ಸೇರಿ ಕರ್ನಾಟಕ ನಕ್ಷೆಯನ್ನು ರಚಿಸಿದರು. ಜತೆಗೆ ಮತದಾನ ಮಾಡಿ ಎಂದೂ ಸಾರಿದರು. ಜಾಗೃತಿ ಗೀತೆಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.

‘ಲೋಕಸಭಾ ಚುನಾವಣೆ 2019’ ಎಂದು ಬರೆದ ಬಿಂದಿಗೆಗಳೊಂದಿಗೆಗ್ರಾಮೀಣ ಶಾಲಾ ಶಿಕ್ಷಕಿಯರು ‘ಹ್ಯಾಪಿ ವೋಟರ್ಸ್ ಡೇ...’ ಹಾಡಿಗೆ ನೃತ್ಯ ಪ್ರದರ್ಶಿಸಿದರು. ನೆರೆದ ಸಾವಿರಾರು ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ದೀಪಾ ಚೋಳನ್, ‘ಇದೇ ಮೊದಲ ಬಾರಿಗೆ ಮತದಾನಕ್ಕೆ ಅರ್ಹತೆ ಪಡೆದಿರುವ ಯುವಜನರು, ಮತಚಲಾಯಿಸಿ ಬೆರಳಿಗೆ ಹಾಕಿಸಿಕೊಂಡ ಶಾಹಿ ಹಾಗೂ ಮತಗಟ್ಟೆ ಕಾಣುವ ಹಾಗೆ ಸೆಲ್ಫಿ ತೆಗೆದುಕೊಂಡು ಜಿಲ್ಲಾ ಸ್ವೀಪ್ ಸಮಿತಿಗೆ ಕಳಿಸಿದರೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು’ ಎಂದರು.

‘ಮತದಾನಕ್ಕೆ ಅರ್ಹತೆ ಹೊಂದ ವಿದ್ಯಾರ್ಥಿಗಳು ತಮ್ಮ ಪಾಲಕರು, ಪೋಷಕರಿಗೆ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಕಡ್ಡಾಯವಾಗಿ ಮತ ಚಲಾಯಿಸಲು ತಿಳಿಸಬೇಕು’ ಎಂದರು.

ಎಫ್.ಬಿ.ಕಣವಿ,ವರಾಮು ಮೂಲಗಿ, ಪ್ರಕಾಶ ಕಂಬಳಿ, ಬಾಬಾಜಾನ್ ಮುಲ್ಲಾ ಮತ್ತು ತಂಡದವರು ಸುಶ್ರಾವ್ಯವಾದ ಚುನಾವಣಾ ಜಾಗೃತಿ ಗೀತೆಗಳನ್ನು ಹಾಡಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ, ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಬಿ.ಸಿ. ಸತೀಶ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್. ಮುನಿರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಎ.ಎಂ.ಮಿರ್ಜಣ್ಣವರ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ.ಖಾಜಿ, ವಿದ್ಯಾ ನಾಡಿಗೇರ, ಎಸ್.ಎಂ.ಹುಡೇದಮನಿ, ಸ್ವೀಪ್ ಸಮಿತಿಯ ಕೆ.ಎಂ.ಶೇಖ್, ಜಿ.ಎನ್.ನಂದನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT