ಮಂಗಳವಾರ, ನವೆಂಬರ್ 24, 2020
20 °C
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್; ಯುಜಿಡಿ ಕಾಮಗಾರಿಗೆ ಭೂಮಿ ಪೂಜೆ

₹150 ಕೋಟಿ ವೆಚ್ಚದಲ್ಲಿ ಉಪರಸ್ತೆಗಳ ಅಭಿವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ನಗರದ ಎಲ್ಲಾ ಉಪರಸ್ತೆಗಳನ್ನು ₹150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಗೆ ಅನುಮೋದನೆ ದೊರೆತಿದ್ದು, ಶೀಘ್ರವೇ ಟೆಂಡರ್ ಕರೆಯಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದ ಬಾದಾಮಿ ನಗರದಲ್ಲಿ ಮಂಗಳವಾರ ಯುಜಿಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಲೋಕೋಪಯೋಗಿ ಇಲಾಖೆಯಿಂದ ₹50 ಕೋಟಿ ವೆಚ್ಚದಲ್ಲಿ ಗದಗ ರಸ್ತೆಯ ರೈಲ್ವೆ ಕೆಳ ಸೇತುವೆಯಿಂದ ಕೇಶ್ವಾಪುರ, ಬೆಂಗೇರಿ, ಗೋಪನಕೊಪ್ಪ, ಗಂಗೂಬಾಯಿ ಹಾನಗಲ್ ಸಂಗೀತ ಶಾಲೆಯಿಂದ ಉಣಕಲ್‌ವರೆಗೆ ಸುಸಜ್ಜಿತ ರಸ್ತೆ ನಿರ್ಮಾಣವಾಗುತ್ತಿದೆ. ಬಾದಾಮಿ ನಗರದ ಉಪ ಮುಖ್ಯರಸ್ತೆ ಸಹ ಅಭಿವೃದ್ಧಿಪಡಿಸಲಾಗುತ್ತಿದ್ದು, ನಾಲ್ಕು ತಿಂಗಳೊಳಗೆ ಮುಗಿಯಲಿದೆ’ ಎಂದರು.

‘ಅವಳಿನಗರದ ರಸ್ತೆಗಳ ಅಭಿವೃದ್ಧಿಗಾಗಿ ₹400 ಕೋಟಿ ಸಿಆರ್‌ಎಫ್ ಅನುದಾನ ಮಂಜೂರಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ರೈಲ್ವೆ ಸ್ಟೇಷನ್ ರಸ್ತೆ, ಲ್ಯಾಮಿಂಗ್ಟನ್ ಹಾಗೂ ಕೋಪ್ಪಿಕರ ರಸ್ತೆಗಳನ್ನು‌ ಅಭಿವೃದ್ಧಿಪಡಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಅನುದಾನದಲ್ಲಿ ಮಧುರಾ ಕಾಲೋನಿ ರಸ್ತೆಯನ್ನು ಸಹ ಅಭಿವೃದ್ಧಿಪಡಿಸಲಾಗಿದೆ. ಲಾಕ್‌ಡೌನ್, ಕಾರ್ಮಿಕರ ಕೊರತೆ ಹಾಗೂ ಮಳೆಯಿಂದಾಗಿ ಕೆಲ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ. ಏಳೆಂಟು ತಿಂಗಳಲ್ಲಿ ಎಲ್ಲಾ ರಸ್ತೆಗಳು ಅಭಿವೃದ್ಧಿಗೊಳ್ಳಲಿವೆ’ ಎಂದರು ಹೇಳಿದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಬಿಜೆಪಿ ಮುಖಂಡರಾದ ಮೇನಕಾ ಹುರುಳಿ, ಆರ್.ಆರ್. ಕುಲಕರ್ಣಿ, ಬೀರಪ್ಪ ಖಂಡೇಕರ, ಮಲ್ಲಿಕಾರ್ಜುನ ಸಾವಕಾರ ಹಾಗೂ ಸಂತೋಷ್ ಚೌವ್ಹಾಣ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು