ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಧಿಕಾರಿ ನೇಮಕ: 23ಕ್ಕೆ ಸತ್ಯ ಬಹಿರಂಗ

ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಸವಾಲು
Last Updated 16 ಫೆಬ್ರುವರಿ 2020, 19:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮೂರುಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ಸಂಬಂಧಿಸಿ ಫೆ.23ರಂದು ನಾನು ಕೆಲ ಸತ್ಯಗಳನ್ನು ಬಹಿರಂಗಪಡಿಸುತ್ತೇನೆ. ಅಂದು ಮಠದ ಪೀಠಾಧಿಪತಿ ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ, ಗಣ್ಯರು
ಮತ್ತು ಭಕ್ತರು ಮಠದ ಆವರಣದಲ್ಲಿ ಬಹಿರಂಗ ಚರ್ಚೆಗೆ ಬರಬೇಕು’ ಎಂದು ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಸವಾಲೆಸೆದರು.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಠದ ಉತ್ತರಾಧಿಕಾರಿ ನೇಮಕಕ್ಕೆ ಸಂಬಂಧಿಸಿ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಹೇಳಿಕೆ ಗುರುಸಿದ್ಧರಾಜ ಸ್ವಾಮೀಜಿ ಅವರದ್ದಲ್ಲ. ಕೆಲವರುಸ್ವಾಮೀಜಿ ಹೆಸರಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿ ಅವರಿಂದ ಒತ್ತಾಯ ಪೂರ್ವಕವಾಗಿಯೂ ಹೇಳಿಸಿರಬಹುದು’ ಎಂದು ಸಂಶಯ ವ್ಯಕ್ತಪಡಿಸಿದರು.

‘ಮಠದ ಉತ್ತರಾಧಿಕಾರಿ ನೇಮಕದ ಪರ ಹಾಗೂ ವಿರೋಧ ಹೇಳಿಕೆಗಳನ್ನು ನೀಡುವವರು ಬಾಯಿ ಮುಚ್ಕೊಂಡಿರಿ. ನಮ್ಮ ಸಮಾಧಾನವನ್ನು ದೌರ್ಬಲ್ಯ ಎಂದು ಭಾವಿಸಬಾರದು. ಮಠದ ಸಂಪ್ರದಾಯದಂತೆ ಉತ್ತರಾಧಿಕಾರಿ ನೇಮಕ ಮಾಡಲಾಗುವುದು’ ಎಂದು ಗುರುಸಿದ್ಧರಾಜ ಸ್ವಾಮೀಜಿ ಹೇಳಿಕೆ ನೀಡಿದ್ದರು.‘ಬಹಿರಂಗ ಚರ್ಚೆಯಲ್ಲಿ ನಾನು ಪಾಲ್ಗೊಳ್ಳುವುದಿಲ್ಲ’ ಎಂದು ಬಸವರಾಜ ಹೊರಟ್ಟಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT