ಬಸವರಾಜ ರಾಜಗುರು ಜನ್ಮ ದಿನಾಚರಣೆ 24ರಂದು ಧಾರವಾಡ:
ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಆಗಸ್ಟ್ 24ರಂದು ಪಂ. ಬಸವರಾಜ ರಾಜಗುರು ಅವರ 105ನೇ ಜನ್ಮ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆಲೂರು ವೆಂಕಟರಾವ ಭವನದಲ್ಲಿ ಸಂಜೆ 5.30 ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಉದ್ಘಾಟನೆ ನೆರವೇರಿಸುವರು. ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಳ್ಳುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.