ಶುಕ್ರವಾರ, ಜನವರಿ 28, 2022
25 °C

ತಡಕೋಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ತಾಲ್ಲೂಕಿನ ತಡಕೋಡ ಗ್ರಾಮದಲ್ಲಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಗ್ರಾಮದ ಮಲ್ಲಪ್ಪ ಈರಪ್ಪ ಜಿಟ್ಟಿ (32) ಮೃತ. ಮದ್ಯವ್ಯಸನಿಯಾಗಿದ್ದ ಈತ, ತಾನು ಮಾಡಿದ್ದ ಸಾಲ ತೀರಿಸಲಾಗದೆ ತನ್ನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ ಎಂದು ಗರಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುಸ್ತಕದ ಅಂಗಡಿಗೆ ಬೆಂಕಿ

ಧಾರವಾಡ: ಕಿಟೆಲ್ ಕಾಲೇಜು ಬಳಿ ಇರುವ ಪುಸ್ತಕದ ಅಂಗಡಿಗೆ ಶನಿವಾರ ರಾತ್ರಿ ಬೆಂಕಿ ತಗುಲಿ, ಪುಸ್ತಕಗಳು ಸೇರಿದಂತೆ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ವಿದ್ಯುತ್ ಶಾರ್ಟ್‌ ಸರ್ಕಿಟ್‌ನಿಂದ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ  ನಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು