ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ದ್ವಿತೀಯ ಪಿಯು ಪೂರಕ‌ ಪರೀಕ್ಷೆ, ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ

Published 20 ಮೇ 2023, 13:56 IST
Last Updated 20 ಮೇ 2023, 13:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮೇ 23ರಿಂದ ಜೂನ್ 3ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT