ಶುಕ್ರವಾರ, ನವೆಂಬರ್ 27, 2020
18 °C

ಪಕ್ಷೇತರ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್‌ ಅಭ್ಯರ್ಥಿ ಕಣ್ಣೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶಿವಶಂಕರ ಕಲ್ಲೂರ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕಣ್ಣೀರು ಹಾಕಿದರು.

‘ಚುನಾವಣೆಯಲ್ಲಿ ಸೋಲು, ಗೆಲುವು ಬೇರೆ ವಿಚಾರ. ಕಣದಿಂದ ಹಿಂದೆ ಸರಿಯುವ ಪ್ರಸಂಗ ಬರಬಹುದು ಎಂದು ನಿರೀಕ್ಷೆಯೇ ಮಾಡಿರಲಿಲ್ಲ. ಪ್ರಚಾರಕ್ಕಾಗಿ ಒಂದು ವರ್ಷದಿಂದ ಕೆಲಸ ಮಾಡಿದ್ದೆ. ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವೆ’ ಎಂದು ಕಲ್ಲೂರ ಹೇಳಿದರು.

ಇದಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ‘ಶಿವಶಂಕರ ಕಲ್ಲೂರ ಅವರು ಕೌಟುಂಬಿಕ ಕಾರಣದಿಂದ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಲಾಗುವುದು’ ಎಂದು ತಿಳಿಸಿದರು.

‘ಕೌಟುಂಬಿಕ ಕಾರಣದಿಂದ ಗುರಿಕಾರ ಇತ್ತೀಚೆಗೆ ಚುನಾವಣಾ ಪ್ರಚಾರದಲ್ಲಿ ತೊಡಗಿರಲಿಲ್ಲ. ಈ ಕುರಿತು ಪಕ್ಷದ ವರಿಷ್ಠರು ಕ್ಷೇತ್ರದ ನಾಲ್ಕು ಜಿಲ್ಲೆಗಳ ಮುಖಂಡರನ್ನು ಸಂಪರ್ಕಿಸಿ ಮಾಹಿತಿ ಪಡೆದು ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.  ಪಕ್ಷದ ವರಿಷ್ಠರ ನಿರ್ಧಾರಕ್ಕೆ ಕಲ್ಲೂರ ಒಪ್ಪಿಗೆ ಸೂಚಿಸಿದ್ದಾರೆ’ ಎಂದರು.

‘ರಾಜಕಾರಣದಲ್ಲಿ ಯಾವುದೂ ನಿರೀಕ್ಷಿತವಲ್ಲ. ಕೆಲವೊಮ್ಮೆ ಇಂತಹ ಬೆಳವಣಿಗೆಗಳು ನಡೆಯುತ್ತಿವೆ. ಇದರಿಂದ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಅಭ್ಯರ್ಥಿಗೆ ಬೆಂಬಲ ನೀಡಲಾಗುತ್ತಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು