ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಂಡಾಯ ಅಭ್ಯರ್ಥಿ ಜೊತೆ ಮಾತಕತೆ’

Last Updated 23 ಆಗಸ್ಟ್ 2021, 16:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪಾಲಿಕೆ ಚುನಾವಣೆಗೆ ಟಿಕೆಟ್‌ ಕೈತಪ್ಪಿ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದವರ ಜೊತೆ ಚರ್ಚಿಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ಪಾಲಿಕೆ ಆವರಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಹೇಳುತ್ತೇವೆ. ಅವರೆಲ್ಲರೂ ಪಕ್ಷದಡಿಯಲ್ಲಿಯೇ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ’ ಎಂದು ಆಶಯ ವ್ಯಕ್ತಪಡಿಸಿದರು.

‘ಎರಡು ಅವಧಿಗೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಿದ ಕಾರಣ, ಅನೇಕ ಕಾರ್ಯಕರ್ತರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇರುತ್ತದೆ. ಅದು ಅವರ ತಪ್ಪಲ್ಲ.‘ಎಲ್ಲ ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT