ಮಂಗಳವಾರ, ಮಾರ್ಚ್ 21, 2023
23 °C

ಧಾರವಾಡ: ತಾಲ್ಲೂಕು ಸಾಹಿತ್ಯ ಸಮ್ಮೇಳನಕ್ಕೆ ಮೆರವಣಿಗೆ ಮೆರಗು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ತಾಲ್ಲೂಕಿನ ಮುಗ್ಗಿಗಟ್ಟಿ ಗ್ರಾಮದಲ್ಲಿ ನಡೆದ ಧಾರವಾಡ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಭಾನುವಾರ ಚಾಲನೆ ನೀಡಿದರು.

ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದ ರಥದಲ್ಲಿ ಸಮ್ಮೇಳನಾಧ್ಯಕ್ಷೆ ಲೀಲಾ ಕಲಕೋಟಿ ಅವರ ಮೆರವಣಿಗೆ ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ಅಲ್ಲಿ ನೆರೆದ ನೂರಾರು ಕನ್ನಡಾಭಿಮಾನಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾಹಿತಿಗಳು ಹಾಗೂ ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮೆರವಣಿಗೆಯುದ್ದಕ್ಕೂ ಕನ್ನಡಾಂಬೆಗೆ ಜೈಕಾರ ಮೊಳಗಿಸಿದರು.

ಮೆರವಣಿಗೆಯಲ್ಲಿ ಕುಂಭಮೇಳ, ಕರಡಿ ಮಜಲು, ಡೊಳ್ಳು ಕುಣಿತ, ಶಾಲಾ ಮಕ್ಕಳ ಲೇಝಿಮ್ ತಂಡ ಸೇರಿದಂತೆ ಹಲವು ಕಲಾಮೇಳಗಳು ಸಮ್ಮೇಳನಕ್ಕೆ ಮೆರಗು ನೀಡಿದವು. ನೋಡಿದೆಲ್ಲಡೆ ಕನ್ನಡ ಧ್ವಜಗಳು ರಾರಾಜಿಸಿದವು. ಮಹಾತ್ಮರ ವೇಷಭೂಣ ಧರಿಸಿದ್ದ ಮಕ್ಕಳು ಗಮನ ಸೆಳೆದರು. ಒಟ್ಟಿನಲ್ಲಿ ಗ್ರಾಮದ ತುಂಬ ನಾಡು-ನುಡಿ ಝೇಂಕಾರ ಅನುರಣಿಸಿತು.

ಇದಕ್ಕೂ ಮೊದಲು ಮುಮ್ಮಿಗಟ್ಟಿ ಸರ್ಕಾರಿ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಠಲ ಭಟ್ಟಂಗಿ ರಾಷ್ಟ್ರಧ್ವಜ, ಕಸಪಾ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ನಾಡಧ್ವಜ, ಧಾರವಾಡ ತಾಲೂಕಾಧ್ಯಕ್ಷೆ ಡಾ.ಶರಣಮ್ಮ ಗೋರೆಬಾಳ ಪರಿಷತ್ ಧ್ವಜಾರೋಹಣ ನೆರವೇರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು