ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: 4.6 ಲಕ್ಷ ಮಾನವ ದಿನಗಳ ಸೃಜನೆಯ ಗುರಿ

Last Updated 7 ಮೇ 2020, 13:49 IST
ಅಕ್ಷರ ಗಾತ್ರ

ಹುಬ್ಬಳ್ಳಿ: 2020–21ರ ಸಾಲಿನಲ್ಲಿ ನರೇಗಾ ಯೋಜನೆಯಡಿ ಹುಬ್ಬಳ್ಳಿ ತಾಲ್ಲೂಕು ಪಂಚಾಯ್ತಿ ವ್ಯಾಪ್ತಿಯಲ್ಲಿ 4.60 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ನಿಗದಿ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಗಂಗಾಧರ ಕಂದಕೂರ ಹೇಳಿದರು.

ಉಮಚಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು ‘ಉಮಚಗಿಯಲ್ಲಿ ರೈತರ ಹೊಲದಲ್ಲಿ ಬದು ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇದುವರೆಗೂ 12 ಸಾವಿರ ಮಾನವ ದಿನಗಳ ಸೃಜನೆ ಮಾಡಲಾಗಿದೆ. ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೃಷಿಹೊಂಡ, ಬದು, ದನದ ಕೊಟ್ಟಿಗೆ‌, ಆಶ್ರಯ ಮನೆಗಳ ನಿರ್ಮಾಣಕ್ಕೆ 90 ಮಾನವ ದಿನಗಳನ್ನು ನೀಡಲಾಗುತ್ತಿದೆ‌‌. ಮುಂದಿನ ಜೂನ್ ಅಂತ್ಯದ ವೇಳೆಗೆ ಎಲ್ಲಾ ಕಾರ್ಯ ಮುಗಿಸಿ ಮಳೆ ನೀರು ಸಂಗ್ರಹಿಸಲು ಯೋಜನೆ ರೂಪಿಸಲಾಗಿದೆ’ ಎಂದರು.

‘ಕೊರೊನಾ ಬಂದ ಕಾರಣ ಮೊದಲು ಕೂಲಿಕಾರರು ಸಿಗುವುದೇ ಕಷ್ಟವಿತ್ತು. ಈಗ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕನಿಷ್ಠ 30ರಿಂದ 40 ಕಾರ್ಮಿಕರು ಸಿಗುತ್ತಿದ್ದಾರೆ. ಇವರು ಮುಂದೆ ನಗರಗಳಿಗೆ ವಲಸೆ ಹೋಗದಂತೆ ಎಚ್ಚರ ವಹಿಸಲಾಗುವುದು. ಹ್ಯಾಂಡ್‌ ಸ್ಯಾನಿಟೈಸರ್‌ ಹಾಗೂ ಮಾಸ್ಕ್‌ ವಿತರಿಸಿ ಸುರಕ್ಷತೆಗೆ ಒತ್ತು ಕೊಡಲಾಗುವುದು’ ಎಂದು ಹೇಳಿದರು.

‍ಪಿಡಿಒ ದಾವಲ್ ಸಾಬ್ ಪಿಂಜಾರು ‘ನರೇಗಾ ಅಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸ್ಥಳದಲ್ಲೇ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ’ ಎಂದರು. ಅ‌ಧಿಕಾರಿಗಳು ಕೋವಿಡ್-19 ಜಾಗೃತಿಯ ಪ್ರತಿಜ್ಞಾ ವಿಧಿ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT