ಶುಕ್ರವಾರ, ಮಾರ್ಚ್ 24, 2023
31 °C
ಸಹ ಶಿಕ್ಷಕನಿಂದ ಹಲ್ಲೆ: ಗಾಯಾಳು ಶಿಕ್ಷಕಿ ಸಾವು

ಶಿಕ್ಷಕನ ಕೋಪಕ್ಕೆ ತಾಯಿಯೂ ಬಲಿ:‌ ಮೂರು ದಿನದ ಹಿಂದೆ ಮೃತಪಟ್ಟಿದ್ದ ಪುತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹುಬ್ಬಳ್ಳಿ: ಸಹ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬುವನಿಂದ ತೀವ್ರ ಹಲ್ಲೆಗೊಳಗಾಗಿ ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ, ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹದಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿ ಗೀತಾ ಬಾರಕೇರ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.

‘ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಗೀತಾ ಅವರನ್ನು ಮೂರು ದಿನಗಳ ಹಿಂದೆ ಕಿಮ್ಸ್‌ಗೆ ತರಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು’ ಎಂದು ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್ ಸಿ. ತಿಳಿಸಿದರು.

‘ಬೆಳಿಗ್ಗೆ 11ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಗೀತಾ ಅವರು ಮೃತಪಟ್ಟಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬದವರಿಗೆ ಶವವನ್ನು ಹಸ್ತಾಂತರಿಸಲಾಯಿತು’ ಎಂದು ಹೇಳಿದರು.

ಗೀತಾ ಮತ್ತು ಅದೇ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಅವರ ಪುತ್ರ ಭರತ ಬಾರಕೇರ ಹಾಗೂ ಸಹ ಶಿಕ್ಷಕ ಸಂಗನಗೌಡ ಪಾಟೀಲ ಅವರ ಮೇಲೆ, ಆರೋಪಿ ಸಹ ಶಿಕ್ಷಕ ಮುತ್ತಪ್ಪ ಹಡಗಲಿ ಡಿ. 20ರಂದು ಸಲಿಕೆಯ ಕಾವಿನಿಂದ ಮನಬಂದಂತೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಭರತ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದ. ಗೀತಾ ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು