ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೈಕ್ಷಣಿಕ ಬದಲಾವಣೆಗೆ ಪ್ರಾಮಾಣಿಕವಾಗಿ ಶ್ರಮಿಸಿ:ಲಾಡ್ 

Published : 6 ಸೆಪ್ಟೆಂಬರ್ 2024, 15:29 IST
Last Updated : 6 ಸೆಪ್ಟೆಂಬರ್ 2024, 15:29 IST
ಫಾಲೋ ಮಾಡಿ
Comments

ಧಾರವಾಡ: ‘ಇಂದಿನ ಶೈಕ್ಷಣಿಕ ಪ್ರಗತಿ, ಗುಣಮಟ್ಟ ಪರಿಶೀಲಿಸಿದರೆ, ಶಿಕ್ಷಕ ಸಮೂಹ ತಮ್ಮ ಆದರ್ಶತನ ಮತ್ತು ಕಾಯಕ ವೃತ್ತಿ ಮೌಲ್ಯಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಕಾಲಘಟ್ಟದಲ್ಲಿದೆ. ಶೈಕ್ಷಣಿಕ ಬದಲಾವಣೆಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿ ವತಿಯಿಂದ ಶುಕ್ರವಾರ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಸಂವಿಧಾನದ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತಬೇಕು. ಪ್ರತಿ ದಿನ ಸಕಾರಾತ್ಮವಾಗಿ ಚಿಂತಿಸುವ ಮೂಲಕ ಮಕ್ಕಳಲ್ಕಿ ಜಾತ್ಯಾತೀತತೆ, ಸಾಮರಸ್ಯ, ಸಹೋದರತ್ವ, ಭ್ರಾತೃತ್ವದ ಗುಣಗಳನ್ನು ಬೆಳೆಸಬೇಕು. ಶಿಕ್ಷಕರು ರಾಜಕಾರಣಿಗಳ ಹಿಂಬಾಲಕರಾಗದೆ, ಬಸವಣ್ಣ, ಅಂಬೇಡ್ಕರ್‌, ರಾಧಾಕೃಷ್ಣನ್ ಮಾರ್ಗದಲ್ಲಿ ನಡೆದು ಆತ್ಮ ಸಂಸ್ಕಾರದ ಶಿಕ್ಷಣ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಶೈಕ್ಷಣಿಕ ಬದಲಾವಣೆಗೆ ಮಿಷನ್ ವಿದ್ಯಾಕಾಶಿ ಯೋಜನೆ ಮೂಲಕ ಕ್ರಮವಹಿಸಿರುವುದು ಅಭಿನಂದನಾರ್ಹವಾಗಿದ್ದು, ಈ ಕಾರ್ಯಕ್ಕೆ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿ, ಶಿಕ್ಷಕ ಸಮೂಹ ಮತ್ತು ಎಲ್ಲ ಪಾಲಕರು ಪ್ರಾಮಾಣಿಕವಾಗಿ ಕೈಜೋಡಿಸಿ, ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಹುಬ್ಬಳ್ಳಿ –ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್‌ ಸನದಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಸಿಇಒ ಸ್ವರೂಪಾ ಟಿ.ಕೆ., ಮಾಜಿ ಸಂಸದ ಐ.ಜಿ.ಸನದಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ, ಲಕ್ಷ್ಮಿ ಹಿರೇಮಠ, ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಪಾಲ್ಗೊಂಡಿದ್ದರು.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ಬದ ಪಾತ್ರ ವಹಿಸುವ ಶಿಕ್ಷಕರು ಕಲಿಕೆಯ ಜೊತೆಗೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಆದತ್ಯೆ ನೀಡಬೇಕು
ಎನ್.ಎಚ್.ಕೋನರಡ್ಡಿ ಶಾಸಕ

ಜನಪದ ಹಾಡಿಗೆ ಲಾಡ್ ಹೆಜ್ಜೆ

ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಉತ್ತರ ಕರ್ನಾಟಕದ ಜೋಗತಿ ಜನಪದ  ಹಾಡಿಗೆ ಕಲಾವಿದ ಶಿಕ್ಷಕ ಶಿಕ್ಷಕಿಯರೊಂದಿಗೆ ಸಚಿವ ಸಂತೋಷ್‌ ಲಾಡ್‌ ಹೆಜ್ಜೆ ಹಾಕಿ ಗಮನ ಸೆಳೆದರು. ಬೆಂಕಿ ಕುಂಡದ ಗಡಿಗೆಯನ್ನು ತಲೆ ಮೇಲೆ ಹೊತ್ತು ಕುಣಿಯುವ ಮೂಲಕ ಸಚಿವರು ಶಿಕ್ಷಕರ ಸಂಭ್ರಮ ಹೆಚ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT