ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಂಡರ್‌ ಶ್ಯೂರ್: ಫೆಬ್ರುವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣ

Last Updated 25 ಸೆಪ್ಟೆಂಬರ್ 2018, 9:33 IST
ಅಕ್ಷರ ಗಾತ್ರ

ಹುಬ್ಬಳ್ಳಿ:ಇಲ್ಲಿನ ಕಾಡಸಿದ್ಧೇಶ್ವರ ಕಾಲೇಜಿನಿಂದ ತೋಳನಕೆರೆವರೆಗೆ ನಿರ್ಮಿಸುತ್ತಿರುವ ಚತುಷ್ಪಥ ಟೆಂಡರ್ ಶ್ಯೂರ್ ರಸ್ತೆ ಕಾಮಗಾರಿ ಫೆಬ್ರುವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು.

ಮಂಗಳವಾರ ಕಾಮಗಾರಿ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿಕ್ರಮಣ ತೆರವು, ಹೆಸ್ಕಾಂ ವಿದ್ಯುತ್‌ ಕಂಬಗಳ ಸ್ಥಳಾಂತರದಲ್ಲಿ ವಿಳಂಬವಾಗಿರುವುದರಿಂದ ಜನವರಿ ಅಂತ್ಯ ಅಥವಾ ಫೆಬ್ರುವರಿವರೆಗೆ ಕಾಮಗಾರಿ ಪೂರ್ಣಗೊಳಿಸಲು ಸಮಯ ಬೇಕಾಗುತ್ತದೆ ಎಂದು ತಿಳಿಸಿದರು.

ಶಿರೂರ ಪಾರ್ಕ್‌ನ ರಾಜಕಾಲುವೆಗೆ ಹೊಸ ಸೇತುವೆ ನಿರ್ಮಾಣ ಕೆಲಸವನ್ನು ಆರಂಭಿಸಬೇಕಿತ್ತು. ಕೇಂದ್ರ ರಸ್ತೆ ನಿಧಿಯಡಿ ಉಣಕಲ್‌– ಇಂಡಿಪಂಪ್‌ ರಸ್ತೆ ಕಾಮಗಾರಿ ನಡೆದಿದೆ. ಈ ರಸ್ತೆ ಬಂದ್ ಮಾಡಿ, ಸೇತುವೆ ನಿರ್ಮಾಣ ಕಾರ್ಯ ಆರಂಭಿಸಿದರೆ ಜನರ ಸಂಚಾರಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ಆ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆಯೆ ಸೇತುವೆ ಕಾಮಗಾರಿ ಆರಂಭವಾಗಲಿದೆ ಎಂದರು.

2.2 ಕಿ.ಮೀ. ಉದ್ದರ ರಸ್ತೆಯನ್ನು ₹ 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈಗಾಗಲೇ ₹ 10 ಕೋಟಿ ವೆಚ್ಚದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆದರೆ, ರಾಜ್ಯ ಸರ್ಕಾರ ಬಿಲ್‌ ಪಾವತಿ ಮಾಡುತ್ತಿಲ್ಲ. ಕೂಡಲೇ ಪೂರ್ಣಗೊಳಿಸಿರುವ ಕಾಮಗಾರಿ ಬಿಲ್‌ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ, ಕಾಮಗಾರಿ ಇನ್ನಷ್ಟು ವಿಳಂಬವಾಗಬಹುದು ಎಂದರು.

ಇದಕ್ಕೂ ಮುನ್ನ ಕಾಮಗಾರಿ ವೀಕ್ಷಿಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸೇತುವೆ ಕಾಮಗಾರಿ ಆರಂಭವಾದಾಗ ಪರ್ಯಾಯ ಸಂಚಾರ ವ್ಯವಸ್ಥೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಡಿಸಿಪಿ ಬಿ.ಎಸ್‌. ನೇಮಗೌಡ ಅವರಿಗೆ ಸೂಚಿಸಿದರು.

ಸಂಸದ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಪಾಲಿಕೆ ಸದಸ್ಯ ಮಹೇಶ ಬುರ್ಲಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT