ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ–ಧಾರವಾಡದಲ್ಲಿ ಉಗ್ರರ ತರಬೇತಿ ಕ್ಯಾಂಪ್‌?

Published 2 ಅಕ್ಟೋಬರ್ 2023, 19:12 IST
Last Updated 2 ಅಕ್ಟೋಬರ್ 2023, 19:12 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ನವದೆಹಲಿ ಪೊಲೀಸರು ಸೋಮವಾರ ಬಂಧಿಸಿರುವ ಮೂವರು ಉಗ್ರರು ಹುಬ್ಬಳ್ಳಿ– ಧಾರವಾಡದಲ್ಲಿ ತರಬೇತಿ ಪಡೆದಿರುವ ಸಾಧ್ಯತೆ ಇದೆ’ ಎಂದು ಅಲ್ಲಿನ ಪೊಲೀಸರು ನೀಡಿರುವ ಹೇಳಿಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಉಗ್ರರನ್ನು ಬಂಧಿಸಿದ ನಂತರ ಪತ್ರಿಕಾಗೋಷ್ಠಿ ನಡೆಸಿದ ದೆಹಲಿಯ ವಿಶೇಷ ಪೊಲೀಸ್‌ ಆಯುಕ್ತ ಎಚ್‌.ಎಸ್‌. ಧಲಿವಾಲ್‌, ‘ಉಗ್ರರು ಹುಬ್ಬಳ್ಳಿ– ಧಾರವಾಡ, ಪಶ್ಚಿಮ ಘಟ್ಟದಲ್ಲಿ ತರಬೇತಿ ಪಡೆದಿರುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ವಿಡಿಯೊ ಗಮನಕ್ಕೆ ಬಂದಿದೆ:

‘ಐಎಸ್ ಜತೆ ನಂಟು ಹೊಂದಿರುವ ಶಂಕೆ ಮೇಲೆ ದೆಹಲಿ ಪೊಲೀಸರು ಮೂವರು ಉಗ್ರರನ್ನು ಬಂಧಿಸಿದ್ದು, ದಕ್ಷಿಣ ಭಾರತದ ಹುಬ್ಬಳ್ಳಿ, ಧಾರವಾಡ ಮತ್ತು ಪಶ್ಚಿಮ ಘಟ್ಟದಲ್ಲಿ ಉಗ್ರರ ತರಬೇತಿ ಕ್ಯಾಂಪ್‌ ಇರುವ ಸಾಧ್ಯತೆ ಇದೆ ಎಂದು ನವದೆಹಲಿ ಪೊಲೀಸರು ಹೇಳಿರುವುದು ಗಮನಕ್ಕೆ ಬಂದಿದೆ’ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರ್‌ ರೇಣುಕಾ ಸುಕುಮಾರ್‌ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಬಂಧಿತರಲ್ಲಿ ಸ್ಥಳೀಯರು ಇರುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಈ ಬಗ್ಗೆ ದೆಹಲಿ ಪೊಲೀಸರ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಮ್ಮ ವ್ಯಾಪ್ತಿಯಲ್ಲಿ ಅಂತಹ ಕೃತ್ಯಗಳು ನಡೆಯುತ್ತಿದ್ದರೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT