ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ: ಸಿನಿಮಿಯ ರೀತಿಯಲ್ಲಿ ಪಿಸ್ತೂಲ್ ತೋರಿಸಿ ಆರೋಪಿ ಬಂಧಿಸಿದ ಪೊಲೀಸರು

Published : 3 ಆಗಸ್ಟ್ 2024, 6:42 IST
Last Updated : 3 ಆಗಸ್ಟ್ 2024, 6:42 IST
ಫಾಲೋ ಮಾಡಿ
Comments

ವಿಜಯಪುರ: ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯುವ ವೇಳೆ ಆರೋಪಿ ಮತ್ತು ಆತನ ಕಡೆಯವರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಫ್ತಿಯಲ್ಲಿದ್ದ ಪೊಲೀಸರು ಪಿಸ್ತೂಲ್ ತೋರಿಸಿ ಸಿನಿಮಿಯ ರೀತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದರು.

ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಹುಬ್ಬಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ತಾಮ್ರದ ವೈರ್ ಕದ್ದಿದ್ದ ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಆರೋಪಿ ಅವಿನಾಶ್ ಮಚ್ಚಾಳೆ ವಿಜಯಪುರ ನಗರದಲ್ಲಿ ಇರುವ ಮಾಹಿತಿ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಮಪ್ತಿಯಲ್ಲಿ ಆಗಮಿಸಿದ್ದರು.

ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಿದ್ದಂತೆ ಆತನ ಜೊತೆ ಇದ್ದ ಮಹಿಳೆಯರು ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಿದರು. ಈ ಸಂದರ್ಭದಲ್ಲಿ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ ಕಾರಣ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಈ ವೇಳೆ ಆರೋಪಿ ಅವಿನಾಶ್ ಪರಾರಿಯಾಗಲು ಯತ್ನ ನಡೆಸಿದಾಗ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್ಐ ಹೊನ್ನಪ್ಪನವರ ಪಿಸ್ತೂಲ್ ತೋರಿಸಿ, ಜನರನ್ನು ಚದುರಿಸಿ ಆರೋಪಿಯನ್ನು ವಶಕ್ಕೆ ಪಡೆದರು.

ಬಳಿಕ ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಗೆ ಕರೆದೊಯ್ದು, ಮಾಹಿತಿ ನೀಡಿ, ಅಲ್ಲಿಂದ ಹುಬ್ಬಳ್ಳಿಗೆ ಕರೆದೊಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT