ಮಂಗಳವಾರ, ಡಿಸೆಂಬರ್ 1, 2020
19 °C

ಹುಬ್ಬಳ್ಳಿ: ಬಸ್‌ ನಿಲ್ದಾಣದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಪ್ರಮುಖ ಭಾಗವಾದ ಅಕ್ಷಯ ಪಾರ್ಕ್‌ ಬಡಾವಣೆಯ ಚೇತನಾ ಕಾಲೇಜು ಎದುರಿಗಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.

ಅಂದಾಜು 45ರಿಂದ 48 ವರ್ಷ ವಯಸ್ಸಿನ ಪುರುಷ ಜೀನ್ಸ್‌ ಪ್ಯಾಂಟ್‌ ಹಾಗೂ ಟಿ ಶರ್ಟ್ ಧರಿಸಿದ್ದಾನೆ. ನೇತಾಡುತ್ತಿದ್ದ ಮೃತದೇಹವನ್ನು ನೋಡಿ ವಾಕಿಂಗ್‌ಗೆ ಹೋಗುತ್ತಿದ್ದ ಜನ ವಿದ್ಯಾನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಣ ಹಾಗೂ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು