ಗುರುವಾರ , ಆಗಸ್ಟ್ 18, 2022
24 °C

ಜಿಗಳಿ ಕೆರೆ ಒಡ್ದು ಒಡೆದು ಅಪಾರ ಹಾನಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಘಟಗಿ: ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲ್ಲೂಕಿನ ಹಟಕಿನಾಳ ಗ್ರಾಮದ ಜಿಗಳಿ ಕೆರೆ ಒಡ್ದು ಒಡೆದು ಕೆರೆಯ ನೀರು ರೈತರ ಜಮೀನುಗಳಿಗೆ ನುಗ್ಗಿ ಅಪಾರ ಹಾನಿ ಸಂಭವಿಸಿದೆ.

ಕೆರೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಶೇಖರಣೆ ಆಗಿದ್ದರಿಂದ ಶುಕ್ರವಾರ ಕೆರೆಯ ಒಡ್ದು ಒಡೆದಿದೆ. ನೀರಿನ ರಭಸಕ್ಕೆ ಬೆಳೆಗಳು ಕೊಚ್ಚಿ ಹೋಗಿವೆ. ತಾಲ್ಲೂಕು ಆಡಳಿತದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರೈತರಿಗೆ ಪರಿಹಾರ ನೀಡಬೇಕೆಂದು ಹಟಕಿನಾಳ ಗ್ರಾಮದ ರೈತರಾದ ಮಲ್ಲಯ್ಯ ಗೋಡಿನಮನಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ದೌಡಾಯಿಸಿದ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಕೆರೆಯ ಒಡ್ದು ಒಡೆದು ರೈತರ ಬೆಳೆ ಹಾನಿಯಾದ ಕುರಿತು ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ ಎಂದು ತಿಳಿಸಿದರು. 

ತಾಲ್ಲೂಕಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವ ಕಾರಣ ಹೊಲದಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತು ಮೊಳಕೆ ಒಡೆದ ಬೀಜಗಳು ಭೂಮಿಯಿಂದ ಮೇಲಕ್ಕೆ ಬಾರದೆ ಕೂಡ ಹಾನಿ ಸಂಭವಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು