ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ವಿಶ್ವದಲ್ಲೇ ಅತ್ಯಂತ ಉದ್ದದ ರೈಲ್ವೆ ಪ್ಲಾಟ್‌ ಫಾರ್ಮ್‌

Last Updated 4 ಜೂನ್ 2020, 12:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಜ್ಯದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ವಾಣಿಜ್ಯ ನಗರಿಯಲ್ಲಿ ವಿಶ್ವದಲ್ಲೇ ಅತಿ ಉದ್ದದ ಪ್ಲಾಟ್‌ ಫಾರ್ಮ್‌ ನಿರ್ಮಾಣವಾಗಲಿದೆ.

ಈಗಿರುವ ಒಂದನೇ ಪ್ಲಾಟ್‌ಫಾರ್ಮ್‌ 550 ಮೀಟರ್‌ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್‌ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್‌ ಮಾರ್ಗವನ್ನು ಪೂರ್ಣ ಪ್ಲಾಟ್‌ಫಾರ್ಮ್‌ ಆಗಿ ಪರಿವರ್ತಿಸಲಾಗುವುದು. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದ್ದಾರೆ.

ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ ಹೊಂದಿರುವ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 1,366 ಮೀಟರ್‌ ಉದ್ದದ ಪ್ಲಾಟ್‌ಫಾರ್ಮ್‌ ಇದ್ದು, ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್‌ ಎನ್ನುವ ಹೆಗ್ಗಳಿಕೆ ಹೊಂದಿದೆ. ಇದನ್ನೂ ಮೀರಿಸುವ ಉದ್ದನೆಯ ಪ್ಲಾಟ್‌ಫಾರ್ಮ್‌ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ. ಕೇರಳದ ಕೊಲ್ಲಂ ಜಂಕ್ಷನ್‌ 1,180.5 ಮೀಟರ್‌ ಮತ್ತು ಪಶ್ಚಿಮ ಬಂಗಾಳದ ಖರಗ್‌ಪುರದ ನಿಲ್ದಾಣದ ಪ್ಲಾಟ್‌ಫಾರ್ಮ್‌ 1,072 ಮೀಟರ್‌ ಉದ್ದವಿದೆ.

ಹುಬ್ಬಳ್ಳಿ–ಬೆಂಗಳೂರು ಜೋಡಿ ರೈಲು ಮಾರ್ಗ ಕಾರ್ಯ ಪ್ರಗತಿಯಲ್ಲಿದ್ದು, ಈ ಕಾರ್ಯ ಪೂರ್ಣಗೊಳಿಸುವ ಜೊತೆಗೆ ಹುಬ್ಬಳ್ಳಿ ನಿಲ್ದಾಣದಲ್ಲಿ ಒಟ್ಟು ಪ್ಲಾಟ್‌ಫಾರ್ಮ್‌ಗಳ ಸಂಖ್ಯೆಯನ್ನು 5ರಿಂದ 8ಕ್ಕೆ ಹಚ್ಚಿಸಲಾಗುವುದು. ಗದಗ ರಸ್ತೆಯಲ್ಲಿ ಹೊಸದಾಗಿ ಇನ್ನೊಂದು ಪ್ರವೇಶ ದ್ವಾರ ಆರಂಭಿಸಲಾಗುವುದು. ಪ್ಲಾಟ್‌ ಫಾರ್ಮ್‌ ನಿರ್ಮಾಣ, ಸಿಗ್ನಲ್‌, ವಿದ್ಯುತ್‌ ಸೇರಿದಂತೆ ಈ ಯೋಜನೆಗೆ ಒಟ್ಟು ₹90 ಕೋಟಿ ವೆಚ್ಚವಾಗಲಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT