ಭಾನುವಾರ, ಏಪ್ರಿಲ್ 11, 2021
32 °C

ಸಾಂಬಯ್ಯ ಹಿರೇಮಠರಿಗೆ ‘ಜಾನಪದ ಲೋಕ’ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕುಂದಗೋಳ ತಾಲ್ಲೂಕಿನ ಹರ್ಲಾಪುರ ಗ್ರಾಮದ ಸಾಂಬಯ್ಯ ಎಸ್. ಹಿರೇಮಠ ಅವರು ಕರ್ನಾಟಕ ಜಾನಪದ ಪರಿಷತ್ತಿನ 2021ನೇ ಸಾಲಿನ ’ಜಾನಪದ ಲೋಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕದ ಜನಪದ ಕಲೆಯ ಉಳಿವಿಗೆ ಹಿರೇಮಠ ಅವರು ನೀಡಿದ ಕೊಡುಗೆ ಪರಿಗಣಿಸಿ ಪರಿಷತ್ತು ಈ ಪ್ರಶಸ್ತಿ ಪ್ರಕಟಿಸಿದೆ. ರಾಮನಗರದ ಜನಪದ ಲೋಕದಲ್ಲಿ ಮಾರ್ಚ್ 12ರಿಂದ 14 ರ ವರೆಗೆ ನಡೆಯುವ ಪ್ರವಾಸಿ ಜನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ₹10 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.

ಹಿರೇಮಠ ಅವರು ತಮ್ಮ ಸಿವೈಸಿಡಿ ತಂಡದೊಂದಿಗೆ ನಾಡಿನಾದ್ಯಂತ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಜನಪದ ಕಲೆ, ಬೀದಿ ನಾಟಕಗಳ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.