ಬುಧವಾರ, ಮೇ 12, 2021
26 °C

ಧಾರವಾಡ | ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಪ್ರಕರಣ ನಗರದ ಕವಳಿಕಾಯಿ‌ ಚಾಳದಲ್ಲಿ ಶನಿವಾರ ನಡೆದಿದೆ.

ಮೌನೇಶ ಪತ್ತಾರ (36) ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ, ಮಗಳಿಗೆ ವಿಷ ನೀಡಿ, ತಾವೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮೌನೇಶ ಟಾಟಾ ಮಾರ್ಕೊಪೋಲೊ ಕಂಪನಿ ಉದ್ಯೋಗಿಯಾಗಿದ್ದರು. ಕಂಪನಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೂಲತಃ ಗದಗ ಜಿಲ್ಲೆ ರೋಣ ತಾಲ್ಲೂಕಿನ ಅಸೂಟಿ ಗ್ರಾಮದವರಾಗಿದ್ದು, ಧಾರವಾಡದಲ್ಲಿ ಉದ್ಯೋಗಕ್ಕಾಗಿ ಬಂದು‌ ನೆಲೆಸಿದ್ದರು.
ಪತ್ನಿ ಅರ್ಪಿತಾ (28), ಮಗಳು ಸುಕೃತಾ (4)ಗೆ ವಿಷ ನೀಡಿ ತಾನು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು