ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದ ಉದ್ದನೆಯ ಪ್ಲಾಟ್‌ಫಾರ್ಮ್‌ ಸಿದ್ಧ

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿರ್ಮಾಣ l 400ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕೆಲಸ
Last Updated 4 ಏಪ್ರಿಲ್ 2021, 1:51 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಾಣಿಜ್ಯ ನಗರಿಯ ರೈಲು ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದನೆಯ ಪ್ಲಾಟ್‌ ಫಾರ್ಮ್‌ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಉದ್ಘಾಟನೆ
ಯಾಗಲಿದೆ.

ನಿಲ್ದಾಣದ ಒಂದನೇ ಪ್ಲಾಟ್‌ ಫಾರ್ಮ್‌ನ ಉದ್ದ ಮೊದಲು 550 ಮೀಟರ್‌ ಇತ್ತು. ಇದನ್ನು ಈಗ 1,505 ಮೀಟರ್‌ಗೆ ವಿಸ್ತರಿಸಲಾಗಿದೆ. ಗೋರಖ್‌ಪುರದಲ್ಲಿ 1,366 ಮೀಟರ್‌ ಉದ್ದದ ಪ್ಲಾಟ್‌ಫಾರ್ಮ್‌ ಇದ್ದು, ಇದು ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್‌ ಎನ್ನುವ ಕೀರ್ತಿ ಹೊಂದಿತ್ತು. ಈಗ ಈ ಹೆಗ್ಗಳಿಕೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪಾಲಾಗಲಿದೆ.

2019ರ ನವೆಂಬರ್‌ನಲ್ಲಿ ಕಾಮಗಾರಿ ಆರಂಭವಾದ ಕೆಲ ತಿಂಗಳ ಬಳಿಕ ಪ್ಲಾಟ್‌ ಫಾರ್ಮ್‌ ಉದ್ದವನ್ನು 1,400 ಮೀಟರ್‌ಗೆ ಹೆಚ್ಚಿಸಲು ಯೋಜನೆ ರೂಪಿಸಲಾಗಿತ್ತು. ಬಳಿಕ ಇದರ ಉದ್ದವನ್ನು ಇನ್ನಷ್ಟು ವಿಸ್ತರಿಸಲು ನಿರ್ಧರಿಸಲಾಯಿತು. ಒಬ್ಬ ಮುಖ್ಯ ಎಂಜಿನಿಯರ್‌, ಏಳು ಜನ ಎಂಜಿನಿಯರ್‌ಗಳನ್ನು ಒಳಗೊಂಡ ತಂಡ ರಚಿಸಲಾಗಿತ್ತು. 400ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್‌ ಹೆಗಡೆ ‘ವಿಶ್ವದ ಉದ್ದನೆಯ ಪ್ಲಾಟ್‌ಫಾರ್ಮ್ ನಿರ್ಮಾಣ ಕೆಲಸ ಪೂರ್ಣಗೊಂಡಿದೆ. ಸ್ವಾಗತ ಕಮಾನಿನಲ್ಲಿ ಇದರ ಬಗ್ಗೆ ಮಾಹಿತಿ ಕೂಡ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು
ಲೋಕಾರ್ಪಣೆ ಮಾಡಲಿದ್ದು, ಪ್ರಧಾನಿ ಕಚೇರಿಯಿಂದ ದಿನಾಂಕ ನೀಡುವುದನ್ನು ಎದುರು ನೋಡುತ್ತಿದ್ದೇವೆ. ಈ ಕಾಮಗಾರಿಗಾಗಿ ₹115 ಕೋಟಿ ವೆಚ್ಚವಾಗಿದೆ’ ಎಂದರು.

ವಿಳಂಬ: ನಿಗದಿತ ಯೋಜನೆಯಂತೆ ಈ ಕಾಮಗಾರಿ ಇದೇ ವರ್ಷದ ಜನವರಿಯಲ್ಲಿ ಪೂರ್ಣಗೊಳ್ಳಬೇಕಿತ್ತು. ಕೋವಿಡ್‌ ಹಾಗೂ ಲಾಕ್‌ಡೌನ್‌ ಕಾರಣದಿಂದಾಗಿ ಉತ್ತರ ಭಾರತದ ಕಾರ್ಮಿಕರು ತಮ್ಮ ರಾಜ್ಯಗಳಿಗೆ ವಾಪಸ್‌ ಹೋಗಿದ್ದರಿಂದ ಕೆಲಸ ವಿಳಂಬವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT