ಶನಿವಾರ, ಜನವರಿ 29, 2022
22 °C

ಧಾರವಾಡ | ಕಳ್ಳತನ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಶ್ರೀನಗರದಲ್ಲಿ ಇತ್ತೀಚೆಗೆ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಳೇ ಹುಬ್ಬಳ್ಳಿ ಠಾಣೆಯ ಇನ್‌ಸ್ಪೆಕ್ಟರ್ ಎ.ಜಿ. ಚವ್ಹಾಣ ನೇತೃತ್ವದ ತಂಡ ಮಂಗಳವಾರ ಮೂವರನ್ನು ಬಂಧಿಸಿದೆ.

ಆರೋಪಿಗಳಿಂದ ₹90 ಸಾವಿರ ಮೌಲ್ಯದ 7 ಗ್ರಾಂ ಚಿನ್ನಾಭರಣ, 320 ಗ್ರಾಂ ಬೆಳ್ಳಿ ಆಭರಣ, ಒಂದು ಎಲ್‌ಇಡಿ ಟಿ.ವಿ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಜ. 3ರಂದು ರಾತ್ರಿ ಆರೋಪಿಗಳು ಮನೆ ಬೀಗ ಮುರಿದು ಕೃತ್ಯ ಎಸಗಿದ್ದರು. ಸದ್ಯ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಡ ವಸೂಲಿ: ಕೋವಿಡ್–19 ಮಾರ್ಗಸೂಚಿ ಉಲ್ಲಂಘನೆ ವಿರುದ್ಧ ಮಂಗಳವಾರ ಅವಳಿನಗರದಲ್ಲಿ ಕಾರ್ಯಾಚರಣೆ ನಡೆಸಿರುವ ಮಹಾನಗರ ಪಾಲಿಕೆಯ ಪರಿಸರ ಎಂಜಿನಿಯರ್‌ಗಳು ಹಾಗೂ ಆರೋಗ್ಯ ನಿರೀಕ್ಷಕರು, ₹26,950 ದಂಡ ವಸೂಲಿ ಮಾಡಿದ್ದಾರೆ. ಇದುವರೆಗೆ ಒಟ್ಟು ₹75 ಸಾವಿರ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು