ಗುರುವಾರ , ಮೇ 26, 2022
23 °C

ವೈದ್ಯರ ಮನೆಯಲ್ಲಿ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ವೈದ್ಯರ ವಸತಿ ಸಂಕೀರ್ಣದ ಮನೆಯೊಂದರ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಚಿನ್ನಾಭರಣ ಸೇರಿದಂತೆ ₹3.32 ಲಕ್ಷ ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದಾರೆ.

ಡಾ. ನಿಖಿಲ್ ಅವರ ಮನೆಯಲ್ಲಿ ಕಳವು ನಡೆದಿದೆ. ನಿಖಿಲ್ ಹಾಗೂ ಅವರ ಪತ್ನಿ ಇಬ್ಬರೂ ವೈದ್ಯರಾಗಿದ್ದು, ಬೆಳಿಗ್ಗೆ 10ಕ್ಕೆ ಕರ್ತವ್ಯಕ್ಕೆ ತೆರಳಿದ್ದರು. ಆಗ ಮನೆಗೆ ನುಗ್ಗಿರುವ ಕಳ್ಳರು ಚಿನ್ನಾಭರಣ, ಲ್ಯಾಪ್‌ಟಾಪ್, 3 ಐ–ಪಾಡ್‌, ವಾಚ್‌ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನೆಲ್ಲ ಕದ್ದುಕೊಂಡು ಹೋಗಿದ್ದಾರೆ ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. 

ಐವರ ಬಂಧನ: ಬಸವ ನಗರದ ಎರಡು ಮನೆಗಳಲ್ಲಿ ಇತ್ತೀಚೆಗೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಎ.ಜಿ. ಚವ್ಹಾಣ ನೇತೃತ್ವದ ತಂಡ ಗುರುವಾರ ಐವರನ್ನು ಬಂಧಿಸಿದೆ.

ಆರೋಪಿಗಳು ಡಿ.12ರಂದು ಎರಡೂ ಮನೆಗಳಲ್ಲಿ ಯಾರೂ ಇಲ್ಲದಿದ್ದಾಗ, ಬಾಗಿಲ ಬೀಗ ಮುರಿದು ₹3.30 ಲಕ್ಷ ಮೌಲ್ಯದ 52 ಗ್ರಾಂ ಚಿನ್ನಾಭರಣ, 390 ಗ್ರಾಂ ಬೆಳ್ಳಿ ಆಭರಣ ಹಾಗೂ ಇತರ ವಸ್ತುಗಳನ್ನು ಕಳವು ಮಾಡಿದ್ದರು. ಕದ್ದ ವಸ್ತುಗಳನ್ನು ವಶಪಡಿಸಿಕೊಂಡು ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು