ಬುಧವಾರ, ಜೂನ್ 3, 2020
27 °C

ಲಾಕ್‌ಡೌನ್‌ ಪರಿಣಾಮ: ಹುಬ್ಬಳ್ಳಿಯಲ್ಲಿ ಮದ್ಯದಂಗಡಿ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಗಬ್ಬೂರಿನ ಆರ್‌ಟಿಒ ಕಚೇರಿ ಸಮೀಪ ಇರುವ ಮೈಸೂರು ಸೆಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಮದ್ಯ ಮಾರಾಟ ಮಳಿಗೆಗೆ ಶನಿವಾರ ನುಗ್ಗಿರುವ ಕಳ್ಳರು, ಅಂದಾಜು ₹1.10 ಲಕ್ಷ ಮೌಲ್ಯದ ಮದ್ಯವನ್ನು ಕದ್ದೊಯ್ದಿದ್ದಾರೆ.

ಬೆಳಗಿನ ಜಾವ ಮಳಿಗೆಯ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು, ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು