ಹುಬ್ಬಳ್ಳಿ: ‘ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ರಾಜ್ಯದಲ್ಲಿ ತೃತೀಯ ರಂಗ ರಚಿಸಲಿದ್ದು, ಫೆ.8ರಂದು ಕಲಬುರಗಿ ವಿಭಾಗಮಟ್ಟದ ಸಮಾವೇಶದಲ್ಲಿ ಹೆಸರು ಘೋಷಿಸಲಾಗುವುದು’ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.

‘ರಾಜ್ಯದಲ್ಲಿ ಭ್ರಷ್ಟಾಚಾರ, ದೌರ್ಜನ್ಯ ಹೆಚ್ಚುತ್ತಿದೆ. ರಾಜಕೀಯ ಪಕ್ಷಗಳಿಂದ ಸುಧಾರಣೆ ಸಾಧ್ಯವಾಗಿಲ್ಲ. ಹೀಗಾಗಿ, ಬದಲಾವಣೆ ಅವಶ್ಯ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು. ಮುಂದೆ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 50 ಸ್ಥಾನ ಗೆಲ್ಲುವ ಗುರಿ ಇದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕಲಬುರಗಿ ಸಮಾವೇಶದಲ್ಲಿ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು. ತೆಲಂಗಾಣದ ಬಿಆರ್ಎಸ್ ಪಕ್ಷದ ಮುಖಂಡರನ್ನು ಆಹ್ವಾನಿಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.