ಶನಿವಾರ, ಏಪ್ರಿಲ್ 10, 2021
33 °C

ಶಾಸಕರು ಅಧಿವೇಶನಕ್ಕೆ ಹಾಜರಾಗದಿದ್ದರೆ ‘ಹೇಬಿಯಸ್‌ ಕಾರ್ಪಸ್‌ಗೆ ಚಿಂತನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ರಾಜೀನಾಮೆ ಸಲ್ಲಿಸಿರುವ ಶಾಸಕರು ಅಧಿವೇಶನಕ್ಕೆ ಹಾಜರಾಗದಿದ್ದರೆ, ಹೈಕೋರ್ಟ್‌ಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲು ಪಕ್ಷ ಗಂಭೀರ ಚಿಂತನೆ ನಡೆಸಿದೆ’ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ರಾಯರಡ್ಡಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಅವರೆಲ್ಲ ಬಂಧನದಲ್ಲಿರುವಂತೆ ಕಾಣುತ್ತಿದೆ. ಕಾನೂನಿನ ರಕ್ಷಣೆಯಲ್ಲಿ ಅವರೊಂದಿಗೆ ಚರ್ಚಿಸಲು, ಮಾತನಾಡಲು ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಲಾಗುವುದು. ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಇದು ಅನಿವಾರ್ಯ’ ಎಂದರು.

‘ಬಿಜೆಪಿ ಅವಿಶ್ವಾಸ ಮತ ಮಂಡನೆಗೆ ಒತ್ತಾಯಿಸುವುದಿಲ್ಲ. ಬದಲಿಗೆ ಸರ್ಕಾರವನ್ನು ಬೀಳಿಸಿ, ರಾಷ್ಟ್ರಪತಿ ಆಡಳಿತ ಹೇರಿ, ಮಧ್ಯಂತರ ಚುನಾವಣೆ ನಡೆಸಲು ಮುಂದಾಗಲಿದೆ’ ಎಂದು ಅವರು ದೂರಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು