ಸೋಮವಾರ, ಮಾರ್ಚ್ 27, 2023
31 °C

ಜನಪರ ಯೋಜನೆ ಮೂಲಕ ಅಭಿವೃದ್ಧಿಗೆ ಆದ್ಯತೆ: ಸಚಿವ ಹಾಲಪ್ಪ ಆಚಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡವಿವಿಧ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈವರೆಗೆ ಜಿಲ್ಲೆಯ 1.35ಲಕ್ಷ ರೈತರ ಬ್ಯಾಂಕ್ ಖಾತೆ ₹365.20 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತವಾರಿ ಸಚಿವ ಹಾಲಪ್ಪ ಆಚಾರ ತಿಳಿಸಿದರು.

ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿವು ಗುರುವಾರ ಬೆಳಿಗ್ಗೆ ಹಮ್ಮಿಕೊಂಡ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಯುವಕರಿಗೆ, ಮಹಿಳೆಯರಿಗೆ, ರೈತರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ರೈತ ವಿದ್ಯಾನಿಧಿ ಮೂಲಕ ಈವರೆಗೆ 19,384 ವಿದ್ಯಾರ್ಥಿಗಳಿಗೆ ₹10.14 ಕೋಟಿಯಷ್ಟು ಶಿಷ್ಯವೇತನವನ್ನು ಸರ್ಕಾರ ಬಿಡುಗಡೆ ಮಾಡಿದೆ’ ಎಂದರು.

‌‘ನವಲಗುಂದದಲ್ಲಿ ಬೃಹತ್ ಜವಳಿ ಪಾರ್ಕ್ ಅನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತಿದ್ದು, ಸುಮಾರು 3 ಸಾವಿರ ಯುವಜನರಿಗೆ ಉದ್ಯೋಗ ದೊರೆಯಲಿದೆ. ಮುಂಬರುವ ದಿನಗಳಲ್ಲಿ ಪ್ರಧಾನಮಂತಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದಡಿ ಸರ್ಕಾರ, ಸುಮಾರು ₹48 ಕೋಟಿ ವೆಚ್ಚದಲ್ಲಿ ಜಿಲ್ಲೆಯಲ್ಲಿ 7692 ಮನೆಗಳ ನಿರ್ಮಾಣ ಮಾಡಲಾಗುವುದು’ ಎಂದರು.

ಕರ್ನಾಟಕ ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತವನಪ್ಪ ಅಷ್ಟಗಿ, ರಾಜೇಶ ಕೋಟೆನ್ನವರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ರಮಣ ಗುಪ್ತಾ, ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುರೇಶ್ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಉಪವಿಭಾಗಾಧಿಕಾರಿ ಅಶೋಕ ತೇಲಿ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಎಚ್ಒ ಡಾ. ಪಾಟೀಲ ಶಶಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು