ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಟ್‌ ತಪಾಸಣೆ: ನೈರುತ್ಯ ರೈಲ್ವೆಗೆ ₹6 ಕೋಟಿ ಆದಾಯ

Last Updated 9 ಡಿಸೆಂಬರ್ 2022, 12:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಟಿಕೆಟ್‌ ತಪಾಸಣೆಯಿಂದನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗಕ್ಕೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹6 ಕೋಟಿ ಆದಾಯ ಬಂದಿದೆ.

ಟಿಕೆಟ್‌ ರಹಿತ, ಕ್ರಮರಹಿತ ಪ್ರಯಾಣ ಮತ್ತು ಅನಧಿಕೃತ ಮಾರಾಟ ತಡೆಗಟ್ಟಲು ರೈಲುಗಳಲ್ಲಿ ಮತ್ತು ರೈಲು ನಿಲ್ದಾಣಗಳಲ್ಲಿ ನಿಯಮಿತವಾಗಿ ಟಿಕೆಟ್‌ ತಪಾಸಣೆ, ಟಿಕೆಟ್‌ ತಪಾಸಣಾ ಅಭಿಯಾನ ನಡೆಸಲಾಗುತ್ತಿದೆ.

ಪ್ರಸಕ್ತ ವರ್ಷದ ನವೆಂಬರ್‌ನಲ್ಲಿ ಟಿಕೆಟ್‌ ರಹಿತ, ಕ್ರಮರಹಿತ ಪ್ರಯಾಣದ 8,967 ಪ್ರಕರಣಗಳನ್ನು ಪತ್ತೆ ಹಚ್ಚಿ ₹60.3 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 250 ದಿನಗಳಲ್ಲಿ ಹುಬ್ಬಳ್ಳಿ ವಿಭಾಗವು ಟಿಕೆಟ್‌ ರಹಿತ, ಕ್ರಮರಹಿತ ಪ್ರಯಾಣದ ಒಟ್ಟು 82,679 ಪ್ರಕರಣಗಳನ್ನು ಪತ್ತೆ ಮಾಡಿ ₹6 ಕೋಟಿ ಆದಾಯವನ್ನು ಗಳಿಸಿದೆ ಎಂದು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ ಹರೀತಾ ಎಸ್‌., ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT