ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಲ್ದಾಣದ ಕೌಂಟರ್‌ನಲ್ಲೇ ಟಿಕೆಟ್‌ ಪಡೆಯಲು ಸೌಲಭ್ಯ

Last Updated 2 ಮಾರ್ಚ್ 2022, 2:49 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್‌ ಪ್ರಕರಣಗಳು ಹೆಚ್ಚಿದ್ದ ಸಮಯದಲ್ಲಿ ರೈಲುಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಬೇಕಾದ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಈಗ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಕಾರಣ ಈ ಕೆಳಗಿನ ರೈಲುಗಳಲ್ಲಿ ಆ ವ್ಯವಸ್ಥೆ ತೆಗೆದು ಹಾಕಲಾಗಿದೆ.

ಪ್ರಯಾಣಿಕರು ನೇರವಾಗಿ ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್‌ ಪಡೆದು ಖರೀದಿಸಬಹುದಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲುಗಳು: ಬೆಂಗಳೂರು-ಧಾರವಾಡ ಸಿದ್ಧಗಂಗಾ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌, ಯಶವಂತಪುರ–ಹುಬ್ಬಳ್ಳಿ ಯಶವಂತಪುರ ಎಕ್ಸ್‌ಪ್ರೆಸ್‌, ಹುಬ್ಬಳ್ಳಿ– ಮೈಸೂರು ಹಂಪಿ ಎಕ್ಸ್‌ಪ್ರೆಸ್‌, ಮೈಸೂರು-ಧಾರವಾಡ ಎಕ್ಸ್‌ಪ್ರೆಸ್‌, ಮೈಸೂರು-ಬಾಗಲಕೋಟೆ ನಡುವೆ ಸಂಚರಿಸುವ ಬಸವ ಎಕ್ಸ್‌ಪ್ರೆಸ್‌, ಯಶವಂತಪುರ-ವಾಸ್ಕೋಡ ಗಾಮಾ ಎಕ್ಸ್‌ಪ್ರೆಸ್‌, ಬೆಂಗಳೂರು-ಹುಬ್ಬಳ್ಳಿ ಎಕ್ಸ್‌ಪ್ರೆಸ್‌, ಬೆಂಗಳೂರು ಬೆಳಗಾವಿ ಎಕ್ಸ್‌ಪ್ರೆಸ್‌, ಬೆಂಗಳೂರು–ಮೀರಜ್‌ ರಾಣಿ ಚನ್ನಮ್ಮ, ಮೈಸೂರು–ಸೊಲ್ಲಾಪುರ ಗೋಲ್‌ಗುಂಬಜ್‌ ಎಕ್ಸ್‌ಪ್ರೆಸ್ ಮತ್ತು ಯಶವಂತಪುರ-ಪಂಢರಪುರ ಎಕ್ಸ್‌ಪ್ರೆಸ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT