ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಘಟಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟ್ರ್ಯಾಕ್ಟರ್‌ ರ‍್ಯಾಲಿ

Published : 16 ಆಗಸ್ಟ್ 2024, 16:05 IST
Last Updated : 16 ಆಗಸ್ಟ್ 2024, 16:05 IST
ಫಾಲೋ ಮಾಡಿ
Comments

ಕಲಘಟಗಿ: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂಬ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ, ರೈತ ಸಂಘ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಯಿತು.

ಪಟ್ಟಣದ ಎಪಿಎಂಸಿಯಿಂದ ಆರಂಭಗೊಂಡ ರ‍್ಯಾಲಿ ಬಮ್ಮಿಗಟ್ಟಿ ಕ್ರಾಸ್, ಬಸ್ ನಿಲ್ದಾಣ, ಆಂಜನೇಯ ವೃತ್ತ ಮೂಲಕ ಸಾಗಿ ತಹಶೀಲ್ದಾರ್ ಕಚೇರಿ ತಲುಪಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಧಿಕ್ಕಾರ ಕೂಗಿದರು.

ಬೆಳೆವಿಮೆ ನೀತಿ ಬದಲಾಯಿಸಿ ಪ್ರತಿ ರೈತನ ಹೊಲದ ಬೆಳೆ ವಿಮೆ ಜಾರಿ ತರಬೇಕು. ಬರಗಾಲ, ಅತಿವೃಷ್ಟಿ, ಮಳೆ ಹಾನಿ ಪ್ರವಾಹ ಹಾನಿ ಪ್ರಕೃತಿ ವಿಕೋಪದ ಹಾನಿ ಬೆಳೆ ನಷ್ಟ ಪರಿಹಾರದ ಎನ್.ಡಿ.ಆರ್.ಎಫ್ ಮಾನದಂಡ ಬದಲಾಯಿಸಬೇಕು. 60 ವರ್ಷ ಕೃಷಿ ಸೇವೆ ಸಲ್ಲಿಸಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು. ಸಂಸದರ ನಿಧಿಯನ್ನು ರಾಜ್ಯದಾದ್ಯಂತ ಕೆರೆ-ಕಟ್ಟೆಗಳ ಪುನಶ್ಚತನಗೊಳಿಸಲು ಬಳಸಬೇಕು. ದೇಶದ ರೈತರನ್ನು ಸಂರಕ್ಷಿಸಲು ಭಾರತ ಸರ್ಕಾರ ವಿಶ್ವ ವ್ಯಾಪಾರ ಒಪ್ಪಂದದಿಂದ ಹೊರಗೆ ಬರಬೇಕು ಎಂದು ಆಗ್ರಹಿಸಿದರು.

ನಕಲಿ ಬಿತ್ತನೆ ಬೀಜ, ನಕಲಿ ಗೊಬ್ಬರ, ನಕಲಿ ಕೀಟನಾಶಕ, ಮಾರಾಟಕ್ಕೆ ತಡೆಹಾಕಲು ಕಠಿಣ ಕಾನೂನು ಜಾರಿಗೆ ತರಬೇಕು. ರಸಗೊಬ್ಬರ. ಕೀಟನಾಶಕ, ಟ್ರ್ಯಾಕ್ಟರ್ ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ತೆರಿಗೆ ರದ್ದು ಮಾಡಬೇಕು. ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿದ್ದ ಕೃಷಿ ಸಮ್ಮಾನ್ ಯೋಜನೆ ಮರು ಜಾರಿಗೆ ತರಬೇಕು. ಕಾಡಂಚಿನ ಭಾಗದಲ್ಲಿ ವನ್ಯಜೀವಿಗಳಿಂದ  ಆಗುವ ಬೆಳೆ ಹಾನಿ, ಮಾನವ ಹಾನಿ, ಸಂಘರ್ಷ ತಪ್ಪಿಸಲು ವೈಜ್ಞಾನಿಕ ಪರಿಹಾರ ನೀಡಲು ಕ್ರಮ ಜಾರಿ, ಮಹದಾಯಿ ಯೋಜನೆ ಜಾರಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡರಾದ ವೀರೇಶ ಸೊಬರದಮಠ, ನಿಜಗುಣಿ ಕೆಲಗೇರಿ, ಉಳವಪ್ಪ ಬಳಿಗೇರ, ಪರಶುರಾಮ ಎತ್ತಿನಗುಡ್ಡ, ವಸಂತ ಡಾಕಪ್ಪನವರ, ಬಸವಣ್ಣೆಪ್ಪ ಅದರಗುಂಚಿ, ಮಹೇಶ ಬೆಳಗಾಂಕರ, ಜ್ಯೋತಿಬಾ ಹುಲಕೊಪ್ಪ, ಶಂಕ್ರಪ್ಪ ತಾವರಗೇರಿ, ಬಸವರಾಜ ರೊಟ್ಟಿ, ಸಿದ್ದಯ್ಯ ಕಟ್ನೂರಮಠ, ಮಾಳಪ್ಪ ಹೊನ್ನಳ್ಳಿ, ಶಿವು ತಡಸ, ಶಂಭು ಬಳಿಗೇರ, ಮಂಜುನಾಥ ಹೊಸಮನಿ ಇತರರಿದ್ದರು.

ಸಂಯುಕ್ತ ಕಿಸಾನ್ ಮೋರ್ಚಾ, ರೈತ ಸಂಘ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ವತಿಯಿಂದ ಕಲಘಟಗಿ ಪಟ್ಟಣದಲ್ಲಿ ಶುಕ್ರವಾರ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಯಿತು.

ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘ ಒಕ್ಕೂಟ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಕಲಘಟಗಿ ಪಟ್ಟಣದಲ್ಲಿ ಶುಕ್ರವಾರ ಬೃಹತ್ ಟ್ರ್ಯಾಕ್ಟರ್ ‍ರ‍್ಯಾಲಿ ನಡೆಯಿತು
ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘ ಒಕ್ಕೂಟ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಕಲಘಟಗಿ ಪಟ್ಟಣದಲ್ಲಿ ಶುಕ್ರವಾರ ಬೃಹತ್ ಟ್ರ್ಯಾಕ್ಟರ್ ‍ರ‍್ಯಾಲಿ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT