ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಮ್ಸ್‌ಗೆ ಯಂತ್ರಗಳ ಹಸ್ತಾಂತರ

Last Updated 21 ಮೇ 2021, 16:32 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಶುಕ್ರವಾರ ಕಿಮ್ಸ್‌ ಆಸ್ಪತ್ರೆಗೆ 10 ಉಷ್ಣಾಂಶ ತಪಾಸಣಾ ಯಂತ್ರಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮೂಲಕ ಹಸ್ತಾಂತರಿಸಿತು. ಕಿಮ್ಸ್ ವೈದ್ಯ ನಾರಾಯಣ ಹೆಬಸೂರ, ವೈದ್ಯಕೀಯ ಅಧೀಕ್ಷಕ ಅರುಣಕುಮಾರ ಇದ್ದರು.

ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ, ಎಪಿಎಂಸಿ ಮಾರುಕಟ್ಟೆಯಲ್ಲಿ ಕಾರ್ಯನಿರತ ರೈತರಿಗೆ, ವರ್ತಕರಿಗೆ, ಸಾರ್ವಜನಿಕರಿಗೆ ಮತ್ತು ಪೋಲೀಸ್ ಇಲಾಖೆಗೆ ಸುಮಾರು 50 ಸಾವಿರಕ್ಕೂ ಹೆಚ್ಚು ಮಾಸ್ಕ್‌ಗಳನ್ನು ವಿತರಿಸಲಾಗಿದೆ.

ಸಂಸ್ಥೆ ಅಧ್ಯಕ್ಷ ಮಹೇಂದ್ರ ಲದ್ದಡ, ಉಪಾಧ್ಯಕ್ಷರಾದ ವಿನಯ ಜೆ. ಜವಳಿ, ಸಿದ್ದೇಶ್ವರ ಜಿ. ಕಮ್ಮಾರ, ಜಿ.ಜಿ. ಹೊಟ್ಟಿಗೌಡರ, ಗೌರವ ಕಾರ್ಯದರ್ಶಿ ಅಶೋಕ ಗಡಾದ, ಕಾರ್ಯದರ್ಶಿ ಉಮೇಶ ಗಡ್ಡದ ಮಾಜಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮತ್ತು ಬಿಜೆಪಿ ಮುಖಂಡ ರಾಜಣ್ಣ ಕೊರವಿ ಇದ್ದರು. ಪಾಲಿಕೆ ಪೌರ ಕಾರ್ಮಿಕರಿಗೆ ವಿತರಿಸಲು ಇದೇ ವೇಳೆ ಎರಡು ಸಾವಿರ ಮಾಸ್ಕ್‌ಗಳನ್ನು ನೀಡಲಾಯಿತು.

ಒತ್ತಾಯ: ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರಿಗೆ ರಾಜ್ಯ ಸರ್ಕಾರ ₹1,250 ಕೋಟಿ ನೆರವು ಘೋಷಿಸಿದ್ದು, ಉದ್ದಿಮೆದಾರರನ್ನು ಕಡೆಗಣಿಸಿದೆ. ಆದ್ದರಿಂದ ಸಣ್ಣ ಹಾಗೂ ಅತಿ ಸಣ್ಣ ಉದ್ದಿಮೆಗಳ ವಲಯಕ್ಕೆ ಹಾಗೂ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕು ಎಂದು ವಾಣಿಜ್ಯೋದ್ಯಮ ಸಂಸ್ಥೆ ಆಗ್ರಹಿಸಿದೆ.

ಸಂಕಷ್ಟದ ಸಮಯದಲ್ಲಿ ಕೈ ಹಿಡಿಯದಿದ್ದರೆ ಸಣ್ಣ ಹಾಗೂ ಅತಿ ಸಣ್ಣ ಉದ್ದಿಮೆಗಳು ನಶಿಸಿ ಹೋಗುತ್ತವೆ. ಉದ್ಯಮಗಳನ್ನು ನಡೆಸಲು ಸರ್ಕಾರ ಆದಷ್ಟು ಬೇಗನೆ ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರನ್ನು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT