ಗುರುವಾರ , ನವೆಂಬರ್ 26, 2020
19 °C

ಹುಬ್ಬಳ್ಳಿ: ಪೊಲೀಸ್‌ ಕಮಿಷನರ್‌, ಡಿಸಿಪಿ, ಎಸ್‌ಪಿ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬಹಿರಂಗ ‘ಪತ್ರ ವ್ಯವಹಾರ’ದ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರ್‌ ಆರ್‌. ದಿಲೀಪ್‌ ಮತ್ತು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪಿ. ಕೃಷ್ಣಕಾಂತ್ ಅವರನ್ನು ವರ್ಗಾವಣೆ ಮಾಡಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಧಾರವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್‌ ಅವರನ್ನೂ ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಅವರಿಗೆ ಹುದ್ದೆ ತೋರಿಸಿಲ್ಲ.

ದಿಲೀಪ್‌ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇಲ್ಲಿನ ಕಮಿಷನರೇಟ್‌ಗೆ ಕಮಿಷನರ್‌ ಆಗಿ ಐಪಿಎಸ್‌ ಅಧಿಕಾರಿ ಲಾಬೂ ರಾಮ್‌ ಅವರನ್ನು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ್‌ ಅವರನ್ನು ನೇಮಿಸಲಾಗಿದೆ.

ಭೇಟಿಗೆ ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿ ಕೃಷ್ಣಕಾಂತ್‌ ಅವರು ದಿಲೀಪ್ ವಿರುದ್ಧ ಬಹಿರಂಗವಾಗಿ ಪತ್ರ ಬರೆದಿದ್ದರು. ಇದಕ್ಕೆ ಕಮಿಷನರ್‌ ನೋಟಿಸ್ ನೀಡಿದ್ದರು. ಈ ಎಲ್ಲ ಘಟನೆಗಳು ಮತ್ತು ಪತ್ರಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿ ಸಾಕಷ್ಟು ಟೀಕೆ, ಪ್ರತಿಟೀಕೆಗೂ ಕಾರಣವಾಗಿತ್ತು. ಈ ಘಟನೆ ನಡೆದ ಬಳಿಕ ಹುಬ್ಬಳ್ಳಿಗೆ ಬಂದಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ‘ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು