ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಕೇಂದ್ರ ಬಸ್ ನಿಲ್ದಾಣವನ್ನು ₹23.48 ಕೋಟಿ ವೆಚ್ಚದಲ್ಲಿ ಹಾಗೂ ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣವನ್ನು ₹13.11 ಕೋಟಿ ವೆಚ್ಚದಲ್ಲಿ ನವೀಕರಿಸಲಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಬಸ್ ನಿಲ್ದಾಣ ಹಾಗೂ ಶೌಚಾಲಯದ ಅನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಸ್ವಚ್ಛತೆ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಎಲ್ಲಿಯಾದರೂ ಸ್ವಚ್ಛತೆಯಿಲ್ಲವಾದರೆ ವಿಭಾಗೀಯ ನಿಯಂತ್ರಣಾಧಿಕಾರಿ ವಿರುದ್ಧವೇ ಕ್ರಮ ಕೈಗೊಳ್ಳಬೇಕು’ ಎಂದು ಸಾರಿಗೆ ಸಂಸ್ಥೆ ವ್ಯವಸ್ಥಾಪಕರಿಗೆ ಸೂಚಿಸಿದರು.

‘ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಡಿ ನೂರಾರು ಎಕರೆ ಜಾಗವಿದ್ದು, ಅವುಗಳನ್ನು ಆದಾಯದ ಮೂಲವಾಗಿ ಸಮರ್ಥವಾಗಿ ಬಳಸಿಕೊಳ್ಳಬೇಕು. ಬಸ್ ನಿಲ್ದಾಣದ ಬಳಿ ಆಟೊ ಸೇವೆಗೆ ಪೊಲೀಸ್ ಸಹಕಾರದಲ್ಲಿ ಸೂಕ್ತ ಜಾಗ ಹುಡುಕಬೇಕು’ ಎಂದರು.

‘ಸಾರಿಗೆ ವ್ಯವಸ್ಥೆಯಲ್ಲಿ ಕರ್ನಾಟಕವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ದಿನಕ್ಕೆ 1.5 ಕೋಟಿ ಮಂದಿ ಬಸ್ನಲ್ಲಿ ಪ್ರಯಾಣಿಸುತ್ತಾರೆ. ಎರಡೂವರೆ ವರ್ಷದ ಅವಧಿಯಲ್ಲಿ 10 ಸಾವಿರದಷ್ಟು ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದ್ದು, ಆರುನೂರಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಮಹೇಶ ಟೆಂಗಿನಕಾಯಿ, ‘ಶಕ್ತಿ ಯೋಜನೆಯಿಂದ ಸಂಸ್ಥೆಯು ಲಾಭದಲ್ಲಿ ಮುಂದುವರಿಯುತ್ತಿದೆ. ಈ ಯೋಜನೆ ಅನುಷ್ಠಾನದಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಸರ್ಕಾರದಿಂದ ₹932 ಕೋಟಿ ಬರಬೇಕಿದೆ. ಅದನ್ನು ನೀಡಿದರೆ ಮತ್ತಷ್ಟು ಅಭಿವೃದ್ಧಿ ಕಾರ್ಯ ನಡೆಸಲು ಅನುಕೂಲವಾಗಲಿದೆ. ಪ್ರಯಾಣಿಕರು ಸಹ ನಿಲ್ದಾಣವನ್ನು ಶುಚಿಯಾಗಿಟ್ಟುಕೊಂಡು, ನಾಗರಿಕಪ್ರಜ್ಞೆ ಮೆರೆಯಬೇಕು’ ಎಂದರು.

ನಿಲ್ದಾಣದ ವೈಶಿಷ್ಟ್ಯ: ಹುಬ್ಬಳ್ಳಿ ಕೇಂದ್ರ ಬಸ್ ನಿಲ್ದಾಣದಲ್ಲಿ 52 ಪ್ಲಾಟ್ ಫಾರ್ಮ್ಗಳಿದ್ದು, ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಉಪಾಹಾರ ಮಳಿಗೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿದೆ. ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣದಲ್ಲೂ ನಾಲ್ಕು ಪ್ಲಾಟ್ ಫಾರ್ಮ್ಗಳಿದ್ದು, ಶಿಶುಪಾಲನಾ ಕೊಠಡಿ, ಎರಡು ಲಿಫ್ಟ್ಗಳನ್ನು ಅಳವಡಿಸಲಾಗಿದೆ.

ಪ್ರಶಸ್ತಿ ಪ್ರದಾನ: ಅಪಘಾತ ರಹಿತವಾಗಿ ಬಸ್ ಚಾಲನೆ ಮಾಡಿದ ಸಿಬ್ಬಂದಿಗೆ ಬೆಳ್ಳಿ ಮತ್ತು ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮೃತ ನೌಕರರ ಕುಟುಂದವರಿಗೆ ಕುಟುಂಬ ಕಲ್ಯಾಣ ನಿಧಿ ಯೋಜನೆಯಡಿ ಸಹಾಯ ಧನದ ಚೆಕ್ ವಿತರಿಸಲಾಯಿತು. ಹೊಸ ಸ್ಮಾರ್ಟ್ ಟಿಕೆಟ್ ಯಂತ್ರ ಬಿಡುಗಡೆ ಮಾಡಲಾಯಿತು. ಹಾಗೂ ಅನುಕಂಪದ ಆಧಾರದಲ್ಲಿ ನೇಮಕವಾದ ಸಿಬ್ಬಂದಿಗೆ ಆದೇಶಪತ್ರ ವಿತರಿಸಲಾಯಿತು.

ಮೇಯರ್ ಜ್ಯೋತಿ ಪಾಟೀಲ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಹೆಸ್ಕಾಂ ಅಧ್ಯಕ್ಷ ಅಜೀಮ್ಪೀರ್ ಖಾದ್ರಿ, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್. ಜಕ್ಕಪ್ಪನವರ, ಪ್ರದೀಶ ಶೆಟ್ಟರ್, ಪ್ರೊ. ಐ.ಜಿ. ಸನದಿ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಸೇರಿದಂತೆ ಗಣ್ಯರು ಇದ್ದರು.

ಶಕ್ತಿ ಯೋಜನೆ ಹಣ ನೀಡಿ: ಕಾಗೆ

‘ಶಕ್ತಿಯೋಜನೆ ಯಶಸ್ಸಿಗೆ ಸಂಸ್ಥೆಯ ಕಾರ್ಮಿಕ ವರ್ಗದ ಕೊಡುಗೆ ದೊಡ್ಡದಿದ್ದು ಸರ್ಕಾರದಿಂದ ಬರಬೇಕಾದ ಯೋಜನೆ ಹಣವನ್ನು ಶೀಘ್ರ ನೀಡಬೇಕು’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ ಒತ್ತಾಯಿಸಿದರು. ‘ಶಕ್ತಿ ಯೋಜನೆ ಜಾರಿಯಾದ ನಂತರ ಸಂಸ್ಥೆ ವ್ಯಾಪ್ತಿಯಲ್ಲಿ ಪ್ರತಿನಿತ್ಯ 25 ಲಕ್ಷ ಮಂದಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಿರುವ ವರ್ಕ್ಶಾಪ್ ಬ್ರಿಟಿಷ್ ಕಾಲದ್ದಾಗಿದ್ದು ದುರಸ್ತಿಗೆ ಬಂದಿವೆ. ಕೆಲವೆಡೆ ಸಿವಿಲ್ ಕಾಮಗಾರಿ ನಡೆಸಬೇಕಿದೆ. ಎಲ್ಲ ಬಸ್ ನಿಲ್ದಾಣಗಳ ಆವರಣ ಕಾಂಕ್ರೀಟ್ ರಸ್ತೆ ಮಾಡಿದರೆ ಪ್ರತಿವರ್ಷ ದುರಸ್ತಿ ಕಾಮಗಾರಿ ತಪ್ಪಲಿದೆ. ಈ ಎಲ್ಲ ಕಾಮಗಾರಿಗೆ ಶಕ್ತಿ ಯೋಜನೆಯ ಹಣ ಬಿಡುಗಡೆ ಮಾಡಬೇಕು’ ಎಂದರು. ‘ಇಲ್ಲಿ ರಸ್ತೆ ನಿಯಮಗಳನ್ನು ಯಾರೂ ಪಾಲಿಸುತ್ತಿಲ್ಲ. ರಸ್ತೆಗಳೆಲ್ಲ ಗುಂಡಿ ಬಿದ್ದು ಬಸ್ ಸಂಚಾರ ಕಷ್ಟವಾಗಿದೆ. ಇಲ್ಲಿ ಬಸ್ ಒಡಿಸಿದವರು ದೇಶದ ಯಾವ ಮೂಲೆಯಲ್ಲಾದರೂ ಓಡಿಸುವಷ್ಟು ಸಮರ್ಥರಾಗುತ್ತಾರೆ. ಸುಗಮ ಸಂಚಾರಕ್ಕೆ ರಸ್ತೆ ನಿರ್ವಹಣೆಗೆ ಸರ್ಕಾರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು’ ಎಂದರು.

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಟೀಕಸುತ್ತಿದ್ದಾರೆ. ಆದರೆ ವಿವಿಧ ಕಲ್ಯಾಣ ಯೋಜನೆಗೆ ₹1.30 ಸಾವಿರ ಕೋಟಿ ಅನುದಾನ ನೀಡಲಾಗಿದೆ
–ಸಂತೋಷ ಲಾಡ್, ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.